ಮನೋರಂಜನೆ

ಬ್ಯಾಂಕ್ ಅಕೌಂಟ್, ಮೊಬೈಲ್ ಗಳಿಗೆ ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ..

ಮೊಬೈಲ್‌ ಸಿಮ್ ಮತ್ತು ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್ ಮಾಡಲು ಕೇಂದ್ರ ಸರಕಾರ ಮಾರ್ಚ್‌ 31ರವರೆಗೆ ಗಡುವು ನೀಡಿತ್ತು. ಆದರೆ ವಿಧಿಸಲಾಗಿದ್ದ ಕಾಲಮಿತಿಯನ್ನು ವಿಸ್ತರಣೆ ಮಾಡಲಾಗಿದ್ದು ಈ ಕುರಿತು ಸುಪ್ರೀಂ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.

 

 

ಆಧಾರ್ ಕಾರ್ಡಿನ ಸಾಂವಿಧಾನಿಕ ಸಿಂಧುತ್ವದ ಕುರಿತಂತೆ ಸುಪ್ರೀಂ ಕೋರ್ಟಿನ ಅಂತಿಮ ತೀರ್ಪು ಬರುವವರೆಗೂ ಯಾವುದೇ ದಾಖಲೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯಲ್ಲ, ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಗೆ ಸಂಬಂಧಪಟ್ಟಂತೆ ಇದ್ದ ಮಾ.31ರ ಅಂತಿಮ ಗಡುವನ್ನು ಸಿಂಧುತ್ವದ ತೀರ್ಪು ಬರುವವರೆಗೂ ಅನಿರ್ದಿಷ್ಠಾವಧಿಗೆ ಮುಂದೂಡಿದೆ.

ಐವರು ನ್ಯಾಯಾಧೀಶರನ್ನು ಒಳಗೊಂಡ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠವು ” ಯಾವುದೇ ದಾಖಲೆಗಳಿಗೆ ಆಧಾರ್ ಲಿಂಕ್ ಮಾಡುವಂತೆ ನಾಗರೀಕರಿಗೆ ಸರ್ಕಾರ ಒತ್ತಾಯಪಡಿಸುವಂತಿಲ್ಲ” ಎಂದು ತಿಳಿಸಿದೆ. ಇದರ ಜೊತೆಗೆ ಪಾಸ್ ಪೋರ್ಟ್ ವಿತರಿಸಲು ಆಧಾರ್ ಕಡ್ಡಾಯವಲ್ಲ. ಆದರೆ ಇದೇ ಆಧಾರ್ ಕಾಯ್ದೆ ಸೆಕ್ಷನ್ ಏಳರ ಅಡಿ ಬರುವ ಸೇವೆ ಹಾಗೂ ವಿನಾಯ್ತಿಗೆ ಅನ್ವಯ ಆಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top