fbpx
ಮನೋರಂಜನೆ

ವಯಸ್ಸಾಗಿರೋ ಅಂಬಿ ಜೊತೆಯಾಗಲಿರೋ ಚೆಲುವೆ ಖುಷ್ಬೂನೋ? ಇಲ್ಲಾ ರಮ್ಯಕೃಷ್ಣನೋ?

ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಮುಖ್ಯಭೂಮಿಕೆಯಲ್ಲಿರುವ ಕಾರಣಕ್ಕೆ ಆರಂಭಕ್ಕೂ ಮುಂಚೆಯೇ ಸಾಕಷ್ಟು ಹೆಸರು ಮಾಡಿದ್ದ ಚಿತ್ರ `ಅಂಬಿ ನಿಂಗ್ ವಯಸ್ಸಾಯ್ತೋ’. ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಈಗಾಗಲೇ ಕಿಚ್ಚ ಸುದೀಪ್ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.. ಚಿತ್ರದ ವಿಶೇಷ ಪಾತ್ರದಲ್ಲಿ ಸುದೀಪ್ ಅವರು ಅಭಿನಯಿಸುತ್ತಿದ್ದು ಅಂಬಿ ಅವರ ಯವ್ವನದ ಪಾತ್ರವನ್ನು ಸುದೀಪ್ ಮಾಡುತ್ತಿದ್ದಾರೆ.

 

 

ಚಿತ್ರದಲ್ಲಿ ಅಂಬರೀಷ್ ಅವರಿಗೆ ನಾಯಕಿಯಾಗಿ ಹಸನ್ಮುಖಿ ಚೆಲುವೆ ಸುಹಾಸಿನಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು ಆದರೆ ಡೇಟ್ಸ್ ಗಳು ಹೊಂದಾಣಿಕೆ ಮಾಡಿಕೊಳ್ಳಲಾಗದೆ ಸುಹಾಸಿನಿ ಚಿತ್ರದಿಂದ ಹೊರಬರುವ ಸಾಧ್ಯತೆಯಿದೆ ಎನ್ನುತ್ತಿವೆ ಚಿತ್ರತಂಡದ ಮೂಲಗಳು. ಹೀಗಾಗಿ ಖುಷ್ಬೂ ಮತ್ತು ರಮ್ಯಕೃಷ್ಣ ಅವರನ್ನು ಅಂಬರೀಷ್ ಅವರಿಗೆ ಜೋಡಿ ಮಾಡಲು ಚಿತ್ರ ನಿರ್ಮಾಪಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಇಬರಲ್ಲಿ ಯಾರ ಡೇಟ್ಸ್ ಹೊಂದಾಣಿಕೆಯಾಗುತ್ತದೆಯೋ ಅವರು ಅಂಬಿಗೆ ನಾಯಕಿಯಾಗಲಿದ್ದು ಯಾರು ಅಂಟಿಯೂಮವಾಗಿ ಆಯ್ಕೆಯಾಗಲಿದ್ದಾರೆ ಎಂದು ಕಾಡು ನೋಡಬೇಕಾಗಿದೆ.

 

 

ಕಿಚ್ಚ ಕ್ರಿಯೇಶನ್ಸ್ ಅರ್ಪಿಸಿ, ಕೆ.ಎಸ್.ಕೆ. ಶೋ ರೀಲ್ ಪ್ರೊಡಕ್ಷನ್ ಅಡಿಯಲ್ಲಿ ತಯಾರಾಗುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರವನ್ನು ಕಿಚ್ಚನ ಶಿಷ್ಯ ಗುರುದತ್ ಗಾಣಿಗ ಎಂಬ 26ರ ಪೋರ ನಿರ್ದೇಶಿಸುತ್ತಿದ್ದಾನೆ. ಈ ಚಿತ್ರವನ್ನು ಕಿಚ್ಚ ಸುದೀಪ್ ಮತ್ತು ಮಂಜುನಾಥ್ ಗೌಡ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಬರುವ ಅಂಬಿಯವರ ಫ್ಲಶ್ ಬ್ಯಾಕ್ ಸನ್ನಿವೇಶದಲ್ಲಿ ಸುದೀಪ್ ಗೆ ಜೋಡಿಯಾಗಿ ಶ್ರುತಿ ಹರಿಹರನ್ ನಟಿಸುತ್ತಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top