fbpx
ಕನ್ನಡ

ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ.

ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ವಿವಾದ ಭುಗಿಲೆದ್ದಿದ್ದು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ತಮಿಳುನಾಡಿನಾದ್ಯಂತ ಪ್ರತಿಭಟನೆಗಳು ಶುರುವಾಗಿವೆ ಈ ಹಿನ್ನಲೆಯಲ್ಲಿ ತಮಿಳುನಾಡಿನ ಪ್ರತಿಭಟನೆಗಳಿಗೆ ತೀಕ್ಷ್ಣ ಪ್ರತ್ಯುತ್ತರ ನೀಡಲು ಕನ್ನಡ ಪರ ಸಂಘಟನೆಗಳು ಮುಂದಾಗಿವೆ.

 

 

ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿದರೆ ಕರ್ನಾಟಕಕ್ಕೆ ಬೇಕಾಗುವಷ್ಟು ನೀರು ದಕ್ಕುವುದಿಲ್ಲ ಹಾಗಾಗಿ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಬಾರದು ಎಂದು ಆಗ್ರಹಿಸಿ ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಪರ ಸಂಘನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಮಾತು ಮುಂದುವರೆಸಿದ ವಾಟಾಳ್ “ಒಂದು ವೇಳೆ ತಮಿಳುನಾಡಿನ ಪ್ರತಿಭಟನೆಗೆ ಮಣಿದು ಕೇಂದ್ರ ಸರ್ಕಾರ ಏನಾದರೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಿದರೆ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಿಗರು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.

“ಕಾವೇರಿ ವಿಚಾರದಲ್ಲಿ ಕರ್ನಾಟಕದ ವಿರೋಧಿಗಳಾದ ಇನ್ನು ಮುಂದೆ ರಜನಿಕಾಂತ್, ಕಮಲ ಹಾಸನ್ ಚಿತ್ರಗಳನ್ನು ಕರ್ನಾಟಕದಲ್ಲಿ ಪ್ರದರ್ಶನಗೊಳಿಸಲು ಅವಕಾಶ ಮಾಡಿಕೊಡುವುದಿಲ್ಲ.. ಈಗ ತಮಿಳುನಾಡಿನಲ್ಲಿ ನಡೆಯುತ್ತಿರುವ ಧರಣಿಗಳ ವಿರುದ್ಧ ನಾವೂ ಹೋರಾಟ ಮಾಡುತ್ತೇವೆ” ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದ್ ಹೇಳಿಕೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top