fbpx
ಸಿನಿಮಾ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು ಪ್ರಕಟಿಸಿದ ಕೋರ್ಟ್

20 ವರ್ಷಗಳ ಹಿಂದೆ ಕೃಷ್ಣಮೃಗ ಬೇಟೆ ಮಾಡಿರುವ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಜೋಧಪುರದ ನ್ಯಾಯಾಲಯ ತೀರ್ಪನ್ನು ನೀಡಿದೆ. ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

 

 

ಹಮ್ ಸಾಥ್ ಸಾಥ್ ಹೇ ಸಿನಿಮಾ ಶೂಟಿಂಗ್ ವೇಳೆ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು, ಸಲ್ಮಾನ್ ಮಾತ್ರವೇ ಅಲ್ಲದೇ, ಸೈಪ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರ, ನೀಲಂ ಕೂಡ ಆರೋಪಿಗಳಾಗಿದ್ದಾರೆ. ಎಲ್ಲಾ ಆರೋಪಿಗಳು ಇಂದು ಜೋಧ್ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಇದರಂತೆ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ ಎಂದು ತಿಳಿದು ಬಂದಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮಾಡುವುದನ್ನು ಮಾರ್ಚ್‌ 28ರಂದು ಮುಕ್ತಾಯ ಮಾಡಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟ ಮಾಡಿದೆ.

 

ಜೋಧಪುರದ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದೇವ್ ಕುಮಾರ್ ಖಾತ್ರಿ ರವರು ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51ರ ಅಡಿ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಉಳಿದ ಸೈಪ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರ, ನೀಲಂ ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ನೀಡಲಾಗಿದೆ.

 

ಕಾರಿನ ಚಾಲಕನ ಸೀಟಿನಲ್ಲಿ ಕುಳಿತಿದ್ದ ನಟ ಸಲ್ಮಾನ್ ಕೃಷಮೃಗಳಿಗೆ ಗುಂಡು ಹಾರಿಸಿದ್ದರು. ಈ ವೇಳೆ 2 ಕೃಷ್ಣಮೃಗಗಳು ಸಾವನಪ್ಪಿದ್ದವು. ಇದನ್ನು ಅಲ್ಲಿದ್ದ ಜನ ನೋಡಿದಾಗ ನಟರು ಎಸ್ಕೇಪ್ ಆಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top