fbpx
ಸಮಾಚಾರ

ನಾನು ಜೈನ ಸಮುದಾಯಕ್ಕೆ ಸೇರಿಲ್ಲ: ಅಮಿತ್ ಷಾ

ಅಮಿತ್ ಶಾ ಅವರು ನಾನು ಜೈನ ಸಮುದಾಯಕ್ಕೆ ಸೇರಿಲ್ಲ, ತಾನು ಹಿಂದೂ ವೈಷ್ಣವ ಸಮುದಾಯಕ್ಕೆ ಸೇರಿದವರು ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು, ತಾವೊಬ್ಬ ವೈಷ್ಣವ ಹಿಂದೂ ಎಂದು ಹೇಳಿದ್ದಾರೆ. ಬಿಜೆಪಿಯ 38ನೇ ಸಂಸ್ಥಾಪನಾ ದಿನಾಚರಣೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶಾ, ಈ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

ಕೆಲವು ದಿನಗಳಿಂದ ಅಮಿತ್ ಶಾ ಅವರನ್ನು ಜೈನ ಸಮುದಾಯಕ್ಕೆ ಸೇರಿದವರು ಎಂದು ಕಾಲೆಳೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಶಾ ತಿರುಗೇಟು ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಮೊದಲು ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಿಎಂ ಅಲ್ಲ ಅಹಿಂದು ಸಿಎಂ ಎಂದು ಹಾಗು ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರವಿದೆ ಎಂದು ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಮಿತ್‌ ಶಾ ಹಿಂದುವೋ ಅಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಪ್ರಶ್ನೆ ಮಾಡಿದ್ದರು.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top