fbpx
ಸಮಾಚಾರ

ಯೋಗೇಶ್ವರ್ ಗೆದ್ರೆ ಚನ್ನಪಟ್ಟಣ ಬಸ್ ಸ್ಟಾಂಡ್ ನಲ್ಲಿ ನೇಣು ಹಾಕ್ಕೊಳ್ತೀನಿ

ಎಲ್ಲರೂ ಕಾತುರದಿಂದ ಎದುರು ನೋಡುತ್ತಿದ್ದ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಣೆ ಈಗ ಹೊರಬಿದ್ದಿದೆ. ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಣೆ ಮಾಡಲಾಗಿದೆ. ಮೇ 12 ರಂದು ಮತದಾನ ನಡೆಯಲಿದೆ ಎಂದು ತಿಳಿದು ಬಂದಿದೆ. ಮೇ 28 ರಂದು 224 ಸದಸ್ಯರ ಪ್ರಸಕ್ತ ವಿಧಾನಸಭೆಯ ಅವಧಿ ಮುಗಿಯಲಿದೆ, ಅದರೊಳಗೆ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ.

 

 

ಎಲ್ಲ ರಾಜಕೀಯ ಪಕ್ಷಗಳು ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಕುಮಾರಸ್ವಾಮಿ ಅವರು ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಎಂದು ತಿಳಿದು ಬಂದಿದೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಸ್ಪರ್ಧೆ ಖಚಿತ ಆಗಿದೆ ಎನ್ನಲಾಗಿದೆ.

 

ತ್ತೀಚಿಗೆ ಸಿ.ಪಿ.ಯೋಗೇಶ್ವರ್ , ಕುಮಾರಸ್ವಾಮಿ ಚನ್ನಪಟ್ಟಣ ಮತಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಿದರೆ ಸ್ವಾಗತ. ಅವರು ವರ್ಷಕ್ಕೆ-ಎರಡು ವರ್ಷಕ್ಕೆ ಒಮ್ಮೆ ಬರುವ ಗೆಸ್ಟ್ ಲೆಕ್ಚರರ್ ಇದ್ದ ಹಾಗೆ” ಎಂದು ವಾಗ್ದಾಳಿ ನಡೆಸಿದ್ದರು ಈಗ ಯೋಗೇಶ್ವರ್ ಹೇಳಿಕೆ ವಿರುದ್ಧ ಜೆಡಿಎಸ್ ಮುಖಂಡರು ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಅವರ ವಿರುದ್ಧದ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

 

 

ಈ ಸಂಧರ್ಭದಲ್ಲಿ ಮಾತನಾಡಿದ ಜೆಡಿಎಸ್ ಹಿರಿಯ ಮುಖಂಡ ಪುಟ್ಟಸಿದ್ದೇಗೌಡ, ಈ ಬಾರಿ ಚುನಾವಣೆಯಲ್ಲಿ ಸಿ.ಪಿ. ಯೋಗೇಶ್ವರ್ ಗೆದ್ದರೆ ನಾನು ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ನೇಣಿಗೆ ಶರಣಾಗ್ತೀನಿ ಎಂದು ಸವಾಲು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top