ಹೆಚ್ಚಿನ

ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಮಣಿದ ಸರ್ಕಾರ: ಬಾಂಗ್ಲಾದೇಶದಲ್ಲಿ ಮೀಸಲಾತಿ ರದ್ದು

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬಾಂಗ್ಲಾ ದೇಶದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಮಣಿದಿರುವ ನೆರೆಯ ಬಾಂಗ್ಲಾ ಸರ್ಕಾರ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ವಿಶೇಷ ಗುಂಪುಗಳಿಗೆ ಸರಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಒದಗಿಸುವುದ್ನು ವಿರೋಧಿಸಿ ವಿದ್ಯಾರ್ಥಿಗಳು ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸಿದ್ದರು.

 

 

ಬಾಂಗ್ಲಾ ದೇಶದಲ್ಲಿ ಇಲ್ಲಿಯವರೆಗೂ ವಿಶೇಷ ವರ್ಗಕ್ಕೆ ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಬಾಂಗ್ಲಾ ಸರ್ಕಾರ ವಿಶೇಷ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸುವ ಕೋಟಾ ಸಿಸ್ಟಮ್‌ ಅನ್ನು ರದ್ದು ಮಾಡಿದ್ದಾರೆ, ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಸಮೂಹಗಳಿಗೆ ಒದಗಿಸುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಜನ ಉದ್ಯೋಗ ವಂಚಿತ ವಿದ್ಯಾರ್ಥಿಗಳಿಗೆ ಕೊನೆಗೂ ಜಯ ಸಿಕ್ಕಿದೆ.

 

ವಿದ್ಯಾರ್ಥಿಗಳು ವಿರೋಧ ಮಾಡುತ್ತಿರುವುದರಿಂದ ಮೀಸಲಾತಿ ವ್ಯವಸ್ಥೆಯನ್ನೇ ರದ್ದು ಮಾಡಿದ್ದೇವೆ. ಸರ್ಕಾರಿ ಉದ್ಯೋಗಗಳಲ್ಲಿನ ಎಲ್ಲ ಕೋಟಾ ಪದ್ಧತಿಯನ್ನು ರದ್ದುಗೊಳಿಸುವಂತೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ . ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಪ್ರತಿಭಟನೆಯನ್ನು ಪ್ರದರ್ಶಿಸಿದ್ದಾರೆ. ಈಗ ಅವರು ಮನೆಗೆ ಹೋಗಬಹುದು ಎಂದು ಪ್ರಧಾನಿ ಹಸೀನ್​ ಶೇಖ್ ಅವರು ಹೇಳಿದ್ದಾರೆ.

 

 

ಅಪಾರ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ರದ್ದು ಮಾಡಿದ್ದಾರೆ. ಪ್ರಧಾನಿ ಹಸೀನಾ, ಅಶಕ್ತ ಜನರಿಗೆ ಮತ್ತು ಅಲ್ಪಸಂಖ್ಯಾತರಿಗೆ ಉದ್ಯೋಗಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂಬ ಭರವಸೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top