ಸಮಾಚಾರ

ವಿದ್ವತ್ ಮೇಲಿನ ಹಲ್ಲೆ ಪ್ರಕರಣ: ನಲಪಾಡ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ!

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬಹುಕೋಟಿ ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್‌ ನಲಪಾಡ್ ಮತ್ತು ಇತರ ಆರೋಪಿಗಳಿಗೆ ಒಂದನೇ ಎಸಿಎಂಎಂ ನ್ಯಾಯಾಲಯದಿಂದ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಆತನ ಸಹಚರರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಲಾಗಿದೆ.

 

 

ಪರಪ್ಪನ ಅಗ್ರಹಾರ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯ ಕಲಾಪ ಮುಂದೆ ಹಾಜರಾಗಿದ್ದರು. ಈ ವೇಳೆ ನಲಪಾಡ್ ಪರ, ಮತ್ತು ವಿದ್ವತ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಎಲ್ಲಾ ಆರೋಪಿಗಳಿಗೆ ಒಂದನೇ ACMM ಕೋರ್ಟ್​​ನಿಂದ ನ್ಯಾಯಾಂಗ ಬಂಧನವನ್ನು ಏಪ್ರಿಲ್ 28ನೇ ತಾರೀಕಿನವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಸಹ ಕೋರ್ಟ್ ವಜಾಗೊಳಿಸಿದೆ.

 

 

ಏನಿದು ಪ್ರಕರಣ:
ಕಳೆದ ಫೆಬ್ರವರಿ 17ರಂದು ಯುಬಿ ಸಿಟಿಯ ರೆಸ್ಟೊರೆಂಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಹುಕೋಟಿ ಉದ್ಯಮಿ ಯುವಕನೊಬ್ಬನ ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಮತ್ತು ಆತನ ಹತ್ತಕ್ಕೂ ಹೆಚ್ಚು ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮೂರು ದಿನಗಳ ನಂತರ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದರು. ಸದ್ಯ ಮೊಹಮ್ಮದ್ ನಲಪಾಡ್ ಮತ್ತು ಆತನ ಸಹಚರರು ಹಲ್ಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದು ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಿಸಲಾಗಿದೆ. ಜಾಮೀನು ಕೋರಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರೂ ಅರ್ಜಿಯನ್ನು ಮಾನ್ಯಮಾಡದೆ ಸೆಷನ್ ಕೋರ್ಟ್ ಮತ್ತು ಹೈಕೋರ್ಟ್ ಎರಡೂ ಸಹ ಜಾಮೀನು ನೀಡಲು ನಿರಾಕರಿಸಿವೆ

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top