fbpx
ರಾಜಕೀಯ

ಮಗನಿಗೆ ಟಿಕೆಟ್‌ ತಪ್ಪಿಸಿದ್ದು ಯಾರೆಂದು ಯಡಿಯೂರಪ್ಪ ಹೇಳಲಿ: ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ ಮೇ 12 ಕ್ಕೆ ಇನ್ನೂರ ಇಪ್ಪತ್ನಾಲ್ಕು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈಗ ಚುನಾವಣಾ ಅಭ್ಯರ್ಥಿಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದಾರೆ.

 

ಚುನಾವಣಾ ಪ್ರಚಾರ ನಿಮಿತ್ಯ ಹುಬ್ಬಳ್ಳಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರಕುತ್ತಿದೆ; ನಮ್ಮ ಯೋಜನಗೆಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

 

ಇದೆ ವೇಳೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಬಿ.ಎಸ್.ವೈ ಪುತ್ರ ವಿಜಯೇಂದ್ರಗೆ ಬಿಜೆಪಿ ಕೈ ತಪ್ಪಿದರ ಬಗ್ಗೆ ಮಾತನಾಡಿ. ‘ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿಸಲು ಕಾರಣ ಯಾರು ಎಂದು ಯಡಿಯೂರಪ್ಪ ಹೇಳಲಿ. ಸಂತೋಷ, ಅನಂತಕುಮಾರ್, ಶೆಟ್ಟರ್, ಈಶ್ವರಪ್ಪ ಸೇರಿ ಟಿಕೆಟ್ ಕೈತಪ್ಪಿಸಿದ್ದಾರೆ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಮನೆ ಮಾಡಿ, ಒಂದು ತಿಂಗಳು ಪ್ರಚಾರ ಮಾಡಿದ್ದ. ತಂದೆ ಮತ್ತು ಬಿಜೆಪಿ ಹೈಕಮಾಂಡ್ ಮಾತು ಕೇಳಿ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದ. ಯಡಿಯೂರಪ್ಪ ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

 

 

ಮೇ 15 ರಂದು ಫಲಿತಾಂಶ ಹೊರಬೀಳಲಿದ್ದು ಯಾರು ಬಹುಮತ ಪಡೆದು ವಿಜಯಶಾಲಿ ಅಗಲಿದ್ದಾರೆ ಎಂಬುದನ್ನು ಕಾಡು ನೋಡಬೇಕಿದೆ. ಒಂದು ವೇಳೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೇ ಇದ್ದರೆ ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷಕ್ಕೆ ಜೆಡಿಎಸ್ ಮೊರೆ ಹೋಗುವ ಪರಿಸ್ಥಿತಿ ಎದುರಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top