fbpx
ರಾಜಕೀಯ

ಈ ಕಾರಣಕ್ಕೆ ಪ್ರಧಾನಿ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ.

ಇನ್ನೇನು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ ಮೇ ಹನ್ನೆರಡನೇ ತಾರೀಕಿನಿಂದ ಇನ್ನೂರ ಇಪ್ಪತ್ನಾಲ್ಕು ಕ್ಷೇತ್ರಗಳಿಗೆ ವಿಧಾನಸಭೆಯ ಚುನಾವಣೆ ನಡೆಯಲಿದೆ ಈ ಸಮಯದಲ್ಲಿ ಅಭ್ಯರ್ಥಿಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದಾರೆ.

 

 

ಬಿಜೆಪಿ ಪ್ರಚಾರ ನಿಮಿತ್ಯ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಿಂದ ರಾಜ್ಯ ಪ್ರವಾಸ ಕೈಗೊಂಡಿದ್ದು ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ನಿನ್ನೆ ಉಡುಪಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮೋದಿ ಭಾಗವಹಿಸಿದ್ದರು ಆದರೆ. ಪ್ರಧಾನಿ ಮೋದಿ ಶ್ರೀಕೃಷ್ಣಮಠ ಮಠ ಹಾಗು ದೇವಾಲಯಕ್ಕೆ ಹೋಗಿರಲಿಲ್ಲ. ಈಗ ಇದಕ್ಕೆ ಕಾರಣ ಸಿಕ್ಕಿದೆ.

 

 

ರಾಜಕೀಯ ಪ್ರವಾಸದ ಜೊತೆಗೆ ಧಾರ್ಮಿಕ ಪ್ರವಾಸವನ್ನು ಮೋದಿ ಮಾಡುವುದಿಲ್ಲ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ದೇಗುಲಗಳಿಗೆ ಭೇಟಿ ನೀಡುವುದು ಬೇಡ ಎನ್ನುವ ಸಂದೇಶ ಪ್ರಧಾನಿ ಕಚೇರಿಯಿಂದ ರಾಜ್ಯ ಮತ್ತು ಜಿಲ್ಲಾ ಬಿಜೆಪಿಗೆ ಸಂದೇಶ ರವಾನೆ ಆಗಿದೆ ಎಂದು ತಿಳಿದು ಬಂದಿದೆ.

 

 

ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೃಷ್ಣ ಮಠಕ್ಕೆ ಭೇಟಿ ನೀಡದ್ದನ್ನು ಬಿಜೆಪಿ ಖಂಡನೆ ಮಾಡಿತ್ತು. ಇದೀಗ ಮೋದಿಯೂ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮ ಇರಲಿಲ್ಲ. ಇದರಿಂದ ಬಿಜೆಪಿ ಮುಜುಗರಕ್ಕೆ ಒಳಗಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top