ಐಪಿಎಲ್

ಆರ್​​​ಸಿಬಿ ಅಭಿಮಾನಿಗಳಿಗೆ ಒಂದೊಳ್ಳೆ ಸಿಹಿಸುದ್ದಿ!

ಬ್ಯಾಟ್ ಹಿಡಿದು ಕಣಕ್ಕಿಳಿದರೆ ಹೀನಾಮಾನ ಬ್ಯಾಟಿಂಗ್ ನಡೆಸಿ ಎದುರಾಳಿಗಳಿಗೆ ನಡುಕ ಹುಟ್ಟಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಎಬಿ ಡಿ ವಿಲಿಯರ್ಸ್ ಕಳೆದ ಒಂದು ವಾರದಿಂದ ವೈರಲ್ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಎರಡು ಪಂದ್ಯಗಳಲ್ಲಿ ಆಡದ ಕಾರಣ ಆರ್ಸಿಬಿ ಅಭಿಮಾನಿಗಳಲ್ಲಿ ಬೇಸರ ಮೂಡಿತ್ತು. ಆದರೆ ಅವರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಮುಂದಿನ ಪಂದ್ಯದಲ್ಲಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

 

 

ವೈರಲ್ಜ್ವರಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಮಿಸ್ಟರ್.360 ಕಳೆದ ಎರಡು ಪ್ರಮುಖ ಪಂದ್ಯಗಳಲ್ಲಿ ಮಿಸ್ ಆಗಿದ್ದರು. ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಎರಡು ಪಂದ್ಯದಲ್ಲಿ ಎಬಿಡಿ ಕಣಕ್ಕಿಳಿದಿರಲಿಲ್ಲ. ಎಬಿಡಿ ಅನುಪಸ್ಥಿತಿಯಲ್ಲಿಯೇ ರಾಯಲ್​ ಚಾಲೆಂರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ವಿರುದ್ಧ ಪರಾಭವಗೊಂಡಿತ್ತು. ನಂತರ ಮುಂಬೈ ವಿರುದ್ಧದ ಪಂದ್ಯದಲ್ಲಿ ಗೆಲುವನ್ನು ದಾಖಲಿಸಿ ಪ್ಲೇ ಆಫ್ ಕನಸನ್ನು ಇನ್ನೂ ಜೀವಂತವಾಗಿಟ್ಟುಕೊಂಡಿದೆ.

 

 

ಸದ್ಯ ಗೆಲುವಿನ ಟ್ರ್ಯಾಕ್’ನಲ್ಲಿರುವ ಆರ್ಸಿಬಿಗೆ ಎಬಿಡಿ ಮರಳುತ್ತಿರುವುದು ತಂಡಕ್ಕೆ ಆನೆಬಲ ತಂದುಕೊಟ್ಟಿದೆ. ಟೂರ್ನಿಯಲ್ಲಿ ಅದ್ಭುತ ಫಾರ್ಮ್ ನಲ್ಲಿರುವ ಎಬಿಡಿ ಆಡಿರುವ 6 ಮ್ಯಾಚ್ ಗಳಿಂದ 280 ರನ್ ಗಳನ್ನ ಕಲೆ ಹಾಕಿದ್ದಾರೆ. ಹಾಗಾಗಿ ಮೇ 5ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪುಣೆನಲ್ಲಿ ನಡೆಯಲಿರುವ ಪಂದ್ಯದಲ್ಲಿ ಎಬಿಡಿ ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ.. ಬೆಂಗಳೂರು ತಂಡ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಳ್ಳಬೇಕಾದರೆ ಬಾಕಿ ಉಳಿದಿರುವ ಆರು ಪಂದ್ಯಗಳಲ್ಲಿ ಕನಿಷ್ಠ ಐದು ಪಂದ್ಯಗಳನ್ನಾದರೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top