ಸಮಾಚಾರ

ಗುಜರಾತಿ ವ್ಯಾಪಾರ ಕರ್ನಾಟಕದಲ್ಲಿ ಮಾಡ್ತಿದ್ದಾರೆ -ಕುಮಾರ ಸ್ವಾಮಿ ಗರಂ

ಕ್ಷಣದಿಂದ ಕ್ಷಣದಕ್ಕೆ ಚಿತ್ರ ವಿಚಿತ್ರ ತಿರುವುಗಳನ್ನ ಪಡೆದುಕೊಳ್ಳುತ್ತಿರುವ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ಯ ಮುಂದಿನ ಸರ್ಕಾರ ಯಾರು ರಚಿಸುತ್ತಾರೆ? ಹಾಗೂ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದೇ ಕುತೂಹಲ. ಕಾಂಗ್ರೆಸ್ ಮತ್ತು ಜೆಡಿಎಸ್‌ ಮೈತ್ರಿಕೂಟ ನೂತನ ಸರ್ಕಾರ ರಚನೆಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿ,117 ಶಾಸಕರ ಬೆಂಬಲ ತಿಳಿಯಪಡಿಸಿರುವ ಬೆನ್ನಲೇ ಇದೀಗ ನಾಳೆ ಬೆಳಿಗ್ಗೆ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಾಗಿದ್ದಾರೆ ಎಂದು ತಿಳಿದುಬಂದಿದೆ.

 

ರಾಜ್ಯಪಾಲ ವಿ.ಆರ್. ವಾಲಾ ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೇ ಪ್ರಮಾಣವಚನ ಸ್ವೀಕರಿಸಿ ಗರಿಷ್ಠ 15 ದಿನಗಳ ಒಳಗೆ ನಿಮ್ಮ ಬಹುಮತವನ್ನು ನೀವು ಸಾಬೀತು ಪಡಿಸಲು ಸಮಯಾವಕಾಶ ನೀಡುತ್ತೇನೆ ಎಂದು ತಿಳಿಸಿದ್ದಾರೆ.

 

 

ಚುನಾವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಕ್ಷವು 104 ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಬಹುಮತ ಬರಬೇಕೆಂದರೆ 113ಸ್ಥಾನಗಳ ಅವಶ್ಯಕತೆಯಿದೆ. ಈ ಹಿನ್ನಲೆಯಲ್ಲಿ ಬಿಜೆಪಿಗೆ ಇನ್ನೂ 9 ಸ್ಥಾನಗಳ ಅವಶ್ಯಕತೆಯಿದ್ದು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಲು ಕುದುರೆ ವ್ಯಾಪಾರ ನಡೆಯಬಹುದು ಎಂಬ ಭೀತಿಯಿಂದ ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ರೆಸಾರ್ಟ್ ರಾಜಕಾರಣಕ್ಕೆ ಮೊರೆಹೋಗಿದ್ದಾರೆ.

ಗುಜರಾತಿ ವ್ಯಾಪಾರ ಕರ್ನಾಟಕದಲ್ಲಿ ಮಾಡ್ತಿದ್ದಾರೆ ಇವರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ , 15 ದಿನಗಳ ಕಾಲ ಬಿಜೆಪಿಗೆ ಅವಕಾಶ ನೀಡಿರುವುದು ಬಿಜೆಪಿ ಕಡೆ ರಾಜ್ಯಪಾಲರು ಸಹಾಯ ಮಾಡುತ್ತಿರುವುದನ್ನು ತೋರಿಸುತ್ತಿದೆ ಎಂದು ಟೀಕಿಸುತ್ತಿದ್ದಾರೆ ,

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top