ಸಮಾಚಾರ

ಪ್ರಮಾಣ ವಚನ ವಿಚಾರವಾಗಿ ರೋಚಕ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್ ನಾಯಕಿ ರಮ್ಯಾ.

ಕ್ಷಣದಿಂದ ಕ್ಷಣದಕ್ಕೆ ಚಿತ್ರ ವಿಚಿತ್ರ ತಿರುವುಗಳನ್ನ ಪಡೆದುಕೊಳ್ಳುತ್ತಿರುವ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ಯ ಮುಂದಿನ ಸರ್ಕಾರ ಯಾರು ರಚಿಸುತ್ತಾರೆ? ಹಾಗೂ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದೇ ಕುತೂಹಲ. ಕಾಂಗ್ರೆಸ್ ಮತ್ತು ಜೆಡಿಎಸ್‌ ಮೈತ್ರಿಕೂಟ ನೂತನ ಸರ್ಕಾರ ರಚನೆಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿ,117 ಶಾಸಕರ ಬೆಂಬಲ ತಿಳಿಯಪಡಿಸಿರುವ ಬೆನ್ನಲೇ ಬಿ.ಎಸ್‌.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಸುದ್ದಿ ಎಲ್ಲೆಡೆ ಹಬ್ಬಿಕೊಂಡಿದೆ.

 

 

ಗುರುವಾರ ಬೆಳಿಗ್ಗೆ 9:30ಕ್ಕೆ ರಾಜಭವನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜಭವನ ಪ್ರಕಣೆ ಹೊರಡಿಸಿದ್ದು ಈ ಬಗ್ಗೆ ಬಿಜೆಪಿ ಮುಖಂಡ ಸುರೇಶ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ “ನಾಳೆ, ಗುರುವಾರ ಬೆಳಿಗ್ಗೆ ೯.೩೦ ಗಂಟೆಗೆ ರಾಜಭವನದಲ್ಲಿ ಸನ್ಮಾನ್ಯ ಬಿ.ಎಸ್.ಯಡ್ಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂತಸ ಗಳಿಗೆಯಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ.” ಎಂದು ಬರೆದುಕೊಳ್ಳುವ ಮೂಲಕ ಸ್ಪಷ್ಟಪಡಿಸಿದ್ದಾರೆ.

 

 

ಈ ಮಧ್ಯೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಸಾಮಾಜಿಕ ಜಾಲತಾಣ ನಿರ್ವಣೆಯ ಮುಖ್ಯಸ್ಥೆ ರಮ್ಯಾ ಪ್ರಮಾಣ ವಚನಕ್ಕೆ ಸಂಭಂದಿಸಿದಂತೆ ಹೊಸ ಟ್ವಿಸ್ಟ್ ಕೊಟ್ಟಿದ್ದು “ನಾಳೆ ಪ್ರಮಾಣ ವಚನ ತೆಗೆದುಕೊಳ್ಳುವುದು ನಿಜ ಆದರೆ ಯಡಿಯೂರಪ್ಪ ಅಲ್ಲ ಕುಮಾರಸ್ವಾಮಿ. ನಮ್ಮ ಮೂಲಗಳ ಪ್ರಕಾರ ಬೆಳಿಗ್ಗೆ 9.30ಕ್ಕೆ ರಾಜಭವನದಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುತ್ತಾರೆ” ಎಂದು ಟ್ವೀಟ್ ಮಾಡುವ ಮೂಲಕ ಹೊಸ ಗೊಂದಲಕ್ಕೆ ನಾಂದಿ ಹಾಡಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top