ಸಮಾಚಾರ

ಬಿಎಸ್‌ವೈ ಪ್ರಮಾಣವಚನ: ಕಾಂಗ್ರೆಸ್‌ ನಿಂದ ಪ್ರತಿಭಟನೆ

ಬಿ.ಎಸ್‌.ಯಡಿಯೂರಪ್ಪ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದನ್ನು ಖಂಡಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ.

 

 

ಬೆಂಗಳೂರಿನ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್‌ ಮುಖಂಡರು ಪ್ರತಿಭಟಿಸುತ್ತಿದ್ದಾರೆ. ಪಕ್ಷದ ಹಿರಿಯ ನಾಯಕರಾದ ಗುಲಾಬ್‌ ನಬಿ ಆಜಾದ್‌, ಅಶೋಕ್‌ ಗೆಹ್ಲೋಟ್‌, ಮಲ್ಲಿಕಾರ್ಜುನ್‌ ಖರ್ಗೆ, ಕೆ.ಸಿ. ವೇಣುಗೋಪಾಲ್‌, ಸಿದ್ದರಾಮಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ರೆಸಾರ್ಟ್‌ನಲ್ಲಿ ಉಳಿದಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಕೂಡ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ರೆಸಾರ್ಟ್‌ನಿಂದ ಎಲ್ಲಾ ಶಾಸಕರು ಹೊರ ಬಂದಿದ್ದಾರೆ ಎಂದು ತಿಳಿದು ಬಂದಿದೆ.

 

 

ಬಿ.ಎಸ್​.ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ಅತ್ಯಂತ ಸರಳವಾಗಿ ನಡೆಡಿದ್ದು ಕೆಲವೇ ಕೆಲವು ಕೇಂದ್ರದ ಪ್ರಮುಖ ಬಿಜೆಪಿ ನಾಯಕರು ಮಾತ್ರ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರು ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್ ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top