ಸಮಾಚಾರ

ಬಿಎಸ್‌ವೈ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

 

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪದವಿ ಸ್ವೀಕಾರ ಮಡಿದ ಬೆನ್ನಲ್ಲೇ ಬಿಜೆಪಿಯ ಹೊಸ ಸರ್ಕಾರದಿಂದ ಐಪಿಎಸ್ ಅಧಿಕಾರಿಗಳ ಮೊದಲ ವರ್ಗಾವಣೆ ನಡೆದಿದೆ ಎಂದು ತಿಳಿದು ಬಂದಿದೆ. ಸಂದೀಪ್ ಪಾಟೀಲ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ.

 

 

ರೈಲ್ವೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ರವರನ್ನು ಗುಪ್ತದಳದ ಎಡಿಜಿಪಿ, ಕೆಎಸ್‌ಆರ್‌ಪಿ ಡಿಐಜಿ ಆಗಿದ್ದ ಸಂದೀಪ್‌ ಪಾಟೀಲ್ ಅವರನ್ನು ಗುಪ್ತದಳದ ಡಿಐಜಿಯನ್ನಾಗಿ, ಬೀದರ್ ಎಸ್ಪಿಯಾಗಿದ್ದ ಡಿ.ದೇವರಾಜ್ ಅವರನ್ನು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯನ್ನಾಗಿ ಮತ್ತು ಎಸಿಬಿ ಎಸ್ಪಿ ಗಿರೀಶ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top