ಸಮಾಚಾರ

ಕಾಂಗ್ರೆಸ್ ಪ್ರಭಲ ನಾಯಕ ಸತೀಶ್ ಜಾರಕಿಹೊಳಿಗೆ ಗಾಳ ಹಾಕಿದ ಬಿಜೆಪಿ

ರಾಜ್ಯ ರಾಜಕಾರಣದಲ್ಲಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದೊಡ್ಡ ಹೈಡ್ರಾಮಗಳೇ ನಡೆದುಹೋದವು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

 

ಬಿಜೆಪಿ ಬಹುಮತ ಸಾಬೀತು ಪಡಿಸಲು ಕಸರತ್ತು ಭರದಿಂದ ಸಾಗಿದ್ದು. ಇದೇ ವೇಳೆ ಕಾಂಗ್ರೆಸ್ ಪ್ರಮುಖ ನಾಯಕರೋರ್ವರಿಗೆ ಬಿಜೆಪಿ ಗಾಳ ಹಾಕಿತ್ತು ಎನ್ನುವ ವಿಚಾರವೊಂದು ಇದೀಗ ತಿಳಿದು ಬಂದಿದೆ.

 

ಎಐಸಿಸಿ ಕಾರ್ಯದರ್ಶಿಯಾದ ಸತೀಶ ಜಾರಕಿಹೊಳಿ ರವರನ್ನು ಬಿಜೆಪಿ ಸಂಪರ್ಕ ಮಾಡಿದೆ, ಅವರು ತಮ್ಮ ನಿರ್ಧಾರ ತಿಳಿಸಿಲ್ಲ ಎಂದು ಅವರ ಆಪ್ತಮೂಲಗಳಿಂದ ತಿಳಿದುಬಂದಿದೆ. ಮಾಜಿ ಸಚಿವ ಉಮೇಶ ಕತ್ತಿ ಹಾಗು ಶ್ರೀರಾಮುಲು ರವರು ಸತೀಶ ಜಾರಕಿಹೊಳಿ ಅವರ ಸಂಪರ್ಕದಲ್ಲಿದ್ದು, ಸತೀಶ್ ಅವರು ಬೆಂಬಲ ನೀಡಿದರೆ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top