ಸಮಾಚಾರ

ಅಧಿಕಾರವಹಿಸಿಕೊಂಡ 2 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಭರವಸೆ ನೀಡಿದ ನೂತನ ಸಿಎಂ ಬಿಎಸ್‍ವೈ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲರ ಸಸಮ್ಮುಖದಲ್ಲಿ ಬಿಎಸ್​ವೈ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ಎರಡೇ ಗಂಟೆಗಳಲ್ಲಿ ರಾಜ್ಯದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಮಾಡಿರುವುದಾಗಿ ಘೋಷಿಸಿದ್ದಾರೆ.

 

 

ಈ ಹಿಂದೆ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳ ರೈತರ ಒಂದು ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಸಭೆಯಲ್ಲೇ ಸಹಿ ಹಾಕಿದ್ದಾರೆ. ಕೊಟ್ಟ ಮಾತಿನಂತೆ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ರೈತರ ಸಾಲಮನ್ನಾ ಮಾಡಿರುವುದಾಗಿ ವರದಿಯಾಗಿದೆ.

“ರೈತರ ಮತ್ತು ಸಹಕಾರ ಸಂಘದ ಹಾಗೂ ನೇಕಾರರ ಸಾಲಮನ್ನಾ ಕುರಿತು ಅಧಿಕಾರಿಗಳಿದ ಮಾಹಿತಿ ಪಡೆದು ಇನ್ನೆರೆಡು ದಿನಗಳಲ್ಲಿ ಈ ಭರವಸೆ ಈಡೇರಿಸುತ್ತೇನೆ.ಸಾಲಮನ್ನಾ ಕುರಿತು ಮಾಹಿತಿ ನೀಡುವಂತೆ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವೆ” ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top