ಸಮಾಚಾರ

ಸಂಕಷ್ಟದಲ್ಲಿ ರೆಬೆಲ್ ಶಾಸಕರ ಭವಿಷ್ಯ, ಇಕ್ಕಟ್ಟಿನಲ್ಲಿ ಸಿಲುಕಿದ ಕಾಂಗ್ರೆಸ್

ರಾಜ್ಯ ರಾಜಕಾರಣದಲ್ಲಿ ಹೈ ಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಆಗಮಿಸಿ ಗೆದ್ದಿರುವ ರೆಬೆಲ್ ಶಾಸಕರಿಗೆ ಈಗ ಸಂಕಷ್ಟ ಎದುರಾಗಿದೆ ಎಂದು ತಿಳಿದು ಬಂದಿದೆ. ಸ್ಪೀಕರ್ ಆಗಿದ್ದ ಕೋಳಿವಾಡ ಅವರು ಚುನಾವಣೆಯಲ್ಲಿ ಸೋತಿತ್ತು ಈ ಹಿನ್ನೆಲೆಯಲ್ಲಿ ಮೇ 27 ಕ್ಕೆ ಹೈ ಕೋರ್ಟ್ ಈ ವಿಚಾರಣೆ ಮಾಡಲಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ ಹೈ ಕೋರ್ಟ್ ಈ ಮೂವರು ಶಾಸಕರನ್ನು ಅನರ್ಹಗೊಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತೋರಿಸಲು ತೊಂದರೆ ಆಗಬಹುದು ಎನ್ನಲಾಗಿದೆ.

 

 

ಕಾಂಗ್ರೆಸ್ ಹಾಗು ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

 

 

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top