ಸಮಾಚಾರ

ಬಿ.ಎಸ್.ವೈ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲೇ ಸಾಲ ಮನ್ನಾ ಮಾಡಿ ರೈತರಿಗೆ ಬಂಪರ್ ಗಿಫ್ಟ್

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

 

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಅಧಿಕಾರ ಸ್ವೀಕರಿಸಿ ಒಂದು ತಾಸಿನಲ್ಲೇ ರೈತರ ಸಾಲ ಮನ್ನಾ ಮಾಡಿದ್ದಾರೆ. ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ಬಳಿಕ ರೈತರ ಸಾಲಮನ್ನಾ ದಾಖಲೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

 

 

ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳಲ್ಲಿರುವ ರಾಜ್ಯ ರೈತರ 1 ಲಕ್ಷ ರೂ.ವರೆಗಿನ ಸಾಲವನ್ನು ಯಡಿಯೂರಪ್ಪ ಮನ್ನಾ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಅಧಿಕಾರ ಸ್ವೀಕಾರ ಮಾಡಿದ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದರು. ಆದ್ರೆ 1 ಗಂಟೆಯಲ್ಲೇ ಸಾಲ ಮನ್ನಾ ಮಾಡಿ ಭರವಸೆ ಈಡೇರಿಸಿದ್ದಾರೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top