ಸಮಾಚಾರ

ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

 

ರಾಜಭವನದ ಗ್ಲಾಸ್’ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಯಡಿಯೂರಪ್ಪನವರು ಮೂರನೇ ಭಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಯಾವುದೇ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿಲ್ಲ. ಸಮಾರಂಭದಲ್ಲಿ ಐವರು ಕೇಂದ್ರ ಸಚಿವರು, ಬಿಜೆಪಿ ಶಾಸಕರು, ಬಿಜೆಪಿ ಹಿರಿಯ ನಾಯಕರು ಪಾಲ್ಗೊಂಡಿದ್ದರು.

 

 

ಬಿ.ಎಸ್​.ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ಅತ್ಯಂತ ಸರಳವಾಗಿ ನಡೆಡಿದ್ದು ಕೆಲವೇ ಕೆಲವು ಕೇಂದ್ರದ ಪ್ರಮುಖ ಬಿಜೆಪಿ ನಾಯಕರು ಮಾತ್ರ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರು ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್ ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top