fbpx
ಸಮಾಚಾರ

ಜೆಡಿಎಸ್ -ಕಾಂಗ್ರೆಸ್ ದೋಸ್ತಿ – ತೃತೀಯ ರಂಗದ ಬಲಾಬಲ ಪ್ರದರ್ಶನಕ್ಕೆ ಒಂದೊಳ್ಳೆ ಅವಕಾಶ

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಸಿಎಂ ಎಚ್‌.ಡಿ ಕುಮಾರಸ್ವಾಮಿ ರವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಎದುರೇ ತೃತೀಯ ರಂಗದ ಪ್ರಾದೇಶಿಕ ಪಕ್ಷಗಳ ಬಲಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ ಎಂದು ತಿಳಿದು ಬಂದಿದೆ.

 

 

ಮುಂಬರುವ ಲೋಕಸಭಾ ಎಲೆಕ್ಷನ್ ಗು ಮೊದಲು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯಲು ತೃತೀಯ ರಂಗ ಸದೃಢ ಮಾಡಲು ಜೆಡಿಎಸ್‌ ವರಿಷ್ಠ ದೇವೇಗೌಡ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಪ್ರಾದೇಶಿಕ ನಾಯಕರು ಪ್ಲಾನ್ ಮಾಡುತ್ತಿರುವುದು ಇನ್ನು ಗುಟ್ಟಾಗಿ ಉಳಿದಿಲ್ಲ.

ಎಚ್‌.ಡಿ ಕುಮಾರಸ್ವಾಮಿ ರವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅನೇಕ ತೃತೀಯ ರಂಗದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಬಿಎಸ್ಪಿ ನಾಯಕಿ ಮಾಯಾವತಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್‌, ಬಿಹಾರ್ ರಾಜ್ಯದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ಚಂದ್ರಶೇಖರ ರಾವ್‌ ಮತ್ತು ಅವರ ಪುತ್ರ ಕೆಟಿಆರ್‌, ರಾಷ್ಟ್ರೀಯ ಲೋಕದಳದ ನಾಯಕ ಅಜಿತ್ ಸಿಂಗ್‌, ನಟ-ರಾಜಕಾರಣಿ ಕಮಲ್ ಹಾಸನ್‌, ಡಿಎಂಕೆ ನಾಯಕ ಎಂ.ಕೆ ಸ್ಟಾಲಿನ್ ಭಾಗವಹಿಸಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top