ಸಮಾಚಾರ

ನಿಪಾ ವೈರಸ್ ಗೆ ಸಾವನಪ್ಪಿದ ನರ್ಸ್ ಕುಟುಂಬಕ್ಕೆ 20 ಲಕ್ಷ ರೂ, ಪತಿಗೆ ಸರ್ಕಾರಿ ಉದ್ಯೋಗ ಘೋಷಿಸಿದ ಕೇರಳ ಸರ್ಕಾರ

ಇತ್ತೀಚಿಗೆ ಕೇರಳದಲ್ಲಿ ನಿಪಾ ವೈರಸ್‍ಗೆ ಸಾವನಪ್ಪಿದ ನರ್ಸ್ ಲಿನಿ ಕುಟುಂಬಕ್ಕೆ ಕೇರಳ ಸರ್ಕಾರದ 20 ಲಕ್ಷ ರೂ. ಪರಿಹಾರ ಹಾಗೂ ಪತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ನಿಪಾ ವೈರಸ್ ಸೋಂಕು ಹರಡುವಿಕೆಯ ಸದ್ಯದ ಪರಿಸ್ಥಿತಿ ಬಗ್ಗೆ ಕ್ಯಾಬಿನೆಟ್ ಮಾಹಿತಿ ಪಡೆದಿದ್ದು, ಇದುವರೆಗೂ ಸಾವನ್ನಪ್ಪಿರುವ ಕುರಿತ ನಿಖರ ಮಾಹಿತಿ ಸಂಗ್ರಹಣೆ ಮಾಡಿದ್ದಾಗಿ ತಿಳಿಸಿದ್ದಾರೆ.

 

 

ಉತ್ತರ ಕೇರಳದಲ್ಲಿ ‘ನಿಪಾ ವೈರಸ್’ ಸೋಂಕಿಗೆ ಬಲಿಯಾದವರ ಸಂಖ್ಯೆ 11ಕ್ಕೇರಿದ್ದು, ರಾಜ್ಯಾದ್ಯಂತ ಜನರು ಆತಂಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಈ ಸೋಂಕಿಗೆ ತುತ್ತಾಗಿದ್ದವರಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಒಬ್ಬರು ಪೇರಂಬ್ರ ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಈ ನರ್ಸ್ ನಿಪಾ ವೈರಸ್ ಗೆ ತುತ್ತಾಗಿ ಸಾವನ್ನಪ್ಪುವ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. 31 ವರ್ಷದ ಲಿನಿ ಅವರು ಕೇರಳದ್ಯಾಂತ ಹೆಚ್ಚಿನ ಮಂದಿಯನ್ನು ಬಲಿ ಪಡೆಯುತ್ತಿರುವ ನಿಪಾ ವೈರಸ್ ಸೋಂಕು ತಗಲಿದ್ದ ರೋಗಿಗೆ ಚಿಕಿತ್ಸೆ ನೀಡುವ ವೇಳೆ ವೈರಸ್ ಹರಡಿ ಮೃತಪಟ್ಟಿದ್ದಾರೆ.

 

 

ಪ್ರಾಣಿ ಪಕ್ಷಿಗಳು, ಬಾವಲಿಗಳು ತಿಂದ ಹಣ್ಣು ಹಣ್ಣುಗಳನ್ನು ಸೇವನೆ ಮಾಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಮೂವರ ಸಾವಿಗೆ ನಿಪಾ ವೈರಸ್ ಕಾರಣ ಎನ್ನುವುದನ್ನು ದೃಢಪಡಿಸಿದೆ. ಕೇರಳದ ಕೋಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಈ ರೋಗ ವ್ಯಾಪಕವಾಗಿ ಹರಡಿದೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top