ಸಮಾಚಾರ

ಶಾಸಕ ಯತೀಂದ್ರ ಸಿದ್ದರಾಮಯ್ಯ ರಂಜಾನ್ ಪ್ರಯುಕ್ತ ನೀಡಿದ ಕಿಟ್ ನಲ್ಲಿ ಏನಿದೆ.

ನಿನ್ನೆ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಹಾಗೂ ದಿವಂಗತ ರಾಕೇಶ್ ಸಿದ್ದರಾಮಯ್ಯನವರ ಸವಿನೆನಪಿಗಾಗಿ ಹಾರೋಹಳ್ಳಿ-ಮೆಲ್ಲಹಳ್ಳಿ ಗ್ರಾಮದ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದರು ಎಂದು ತಿಳಿದು ಬಂದಿದೆ.

 

 

ಮೈಸೂರು ಜಿಲ್ಲೆಯ ಗರ್ಗೇಶ್ವರಿ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ನೂರಾರು ಮಂದಿ ಭಾಗವಹಿಸಿ ಕಿಟ್ ಸ್ವೀಕರಿಸಿದರು. ಶಾಸಕರಾದ ನಂತರ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಸಲಾಗಿದ್ದು, ಇದು ತನ್ನ ಸೋದರ ದಿ.ರಾಕೇಶ್ ಸಿದ್ದರಾಮಯ್ಯ ಅವರ ಸವಿನೆನಪಿಗಾಗಿ ಏರ್ಪಡಿಸಿದ್ದ ಕಾರ್ಯಕ್ರಮ ಎಂದು ಶಾಸಕ ಡಾ.ಯತೀಂದ್ರ ತಿಳಿಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಗೆದಿದ್ದು ಪ್ರಭಲ ಸಚಿವ ಆಕಾಂಕ್ಷಿ ಆಗಿದ್ದರು ಕೂಡ ಮೋಡಲ್ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಮುಂದಿನ ಸಂಪುಟ ವಿಸ್ತರಣೆಯಲ್ಲಿ ಇವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಬಗ್ಗೆ ಕಾದು ನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top