ಹೆಚ್ಚಿನ

ಪಾಕ್ ಮಾಜಿ ಪ್ರಧಾನಿಗೆ 10 ವರ್ಷ ಜೈಲು ಯಾಕೆ ಗೊತ್ತ

ಪಾಕಿಸ್ತಾನ ಮಾಜಿ ಪ್ರಧಾನಿ ನವಾಬ್ ಷರೀಫ್ ಗೆ ಬಿಗ್ ಶಾಕ್ ಎದುರಾಗಿದೆ. ಪನಾಮಾ ಪೇಪರ್ಸ್ ಹಗರಣದಲ್ಲಿ ದೋಷಿ ಆಗಿದ್ದ ಪಾಕಿಸ್ತಾನ ದೇಶದ ಮಾಜಿ ಪ್ರಧಾನಿ ನವಾಜ್ ಷರೀಫ್‌ಗೆ 10 ವರ್ಷ ಹಾಗೂ ಆತನ ಮಗಳು ಮರಿಯಮ್ ಷರೀಫ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಪಾಕಿಸ್ತಾನ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ.

 

 

 

ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಕುಟುಂಬ ವಿರುದ್ಧದ ಪನಾಮಾ ಪೇಪರ್ಸ್​ ಪ್ರಕರಣ ಸಂಬಂಧ ಪಾಕಿಸ್ತಾನ ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿತ್ತು. ಸುಪ್ರೀಂಕೋರ್ಟ್ ನವಾಜ್ ಷರೀಫ್ ದೋಷಿ ಎಂದು ತೀರ್ಪನ್ನು ನೀಡಿತ್ತು.

ಪನಾಮ ಪೇಪರ್ ಪ್ರಕರಣ:

ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಖಾಸಗಿ ಸಂಸ್ಥೆ `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆ ಯನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿದ್ದರು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿ ಇತ್ತು ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top