ಸಮಾಚಾರ

ದೇವೇಗೌಡ್ರು ಮತ್ತೆ ಯಾವುದೇ ಕಾರಣಕ್ಕೂ ಪಿಎಂ ಆಗುವುದಕ್ಕೆ ಚಾನ್ಸ್ ಇಲ್ವಂತೆ ,ಹೀಗೆ ಹೇಳ್ದವರು ಯಾರ್ ಗೊತ್ತಾ .

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಮತ್ತೆ ಪ್ರಧಾನಿ ಆಗಲು ಸಾಧ್ಯವೇ ಇಲ್ಲ. 2019 ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗುತ್ತಾರೆ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

 

ಮೈಸೂರು ನಗರದಿಂದ ಬೆಂಗಳೂರಿಗೆ ಸಾಗುತ್ತಿದ್ದ ಸಂಧರ್ಭದಲ್ಲಿ ಮಾರ್ಗ ಮಧ್ಯೆ ಮಂಡ್ಯದಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಮಾಧ್ಯಮಕ್ಕೆ ಮಾತನಾಡಿದ ಬಿ.ಶ್ರೀರಾಮುಲು, ಈಗಾಗಲೇ ತೃತೀಯ ರಂಗ ಸಂಘಟನೆಯಾಗಿದ್ದು, ಲೋಕಸಭೆ ಚುನಾವಣೆಯನ್ನು ಇವರೆಲ್ಲರೂ ಒಗ್ಗಟ್ಟಿನಿಂದ ಎದುರಿಸಿದರೂ ಕೂಡ ಮತ್ತೊಮ್ಮೆ ಎಚ್‌.ಡಿ.ದೇವೇಗೌಡರು ದೇಶದ ಪ್ರಧಾನ ಮಂತ್ರಿಯಾಗಲು ಸಾಧ್ಯವಿಲ್ಲವೆಂದು ಅಭಿಪ್ರಾಯಪಟ್ಟರು.

ಮುಂಬರುವ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಂದಾದರು ಸಹಿತ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸಂಸದ ಸ್ಥಾನ ಜಯಿಸುತ್ತದೆ. ಸಮ್ಮಿಶ್ರ ಸರ್ಕಾರದ ಬಜೆಟ್ ಖಂಡಿಸುತ್ತೇವೆ. ಬಜೆಟ್ ನಲ್ಲಿ ಪ್ರಮುಖವಾಗಿ ಪ್ರಾದೇಶಿಕ ಅಸಮಾತೋಲನೆ ಕಾಣುತ್ತಿದೆ. ಇದು ರಾಜ್ಯ ಬಜೆಟ್ ಅಲ್ಲ‌. ಉತ್ತರ ಕರ್ನಾಟಕ, ಕರಾವಳಿ ಹಳೆ ಮೈಸೂರು, ಮಲೆನಾಡೆಂದು ವಿಂಗಡಣೆ ಮಾಡಲಾಗಿದೆ ಎಂದು ಹೇಳಿದರು.

ಲೋಕಸಭೆಯ ಸದಸ್ಯ ಆಗಿದ್ದ ನನಗೆ ಪಕ್ಷ ಶಾಸಕ ಆಗುವ ಅವಕಾಶ ನೀಡಿದೆ. ಆದ್ದರಿಂದ ನಾನು ಮತ್ತೊಮ್ಮೆ ಲೋಕಸಭೆ ಚುನಾವಣೆ ಎದುರಿಸುವ ಪ್ರಶ್ನೆಯೇ ಇಲ್ಲ. ಶಾಸಕನಾಗಿಯೇ ಮುಂದುವರೆಯುತ್ತೇನೆ. ರಾಜ್ಯ ಸರಕಾರದ ಆಡಳಿತ ಗಮನಿಸುತ್ತಿದ್ದೇನೆ. ವಿರೋಧ ಪಕ್ಷ ದಲ್ಲಿ ಕುಳಿತು ಸರಕಾರದ ವಿರುದ್ಧ ಹೋರಾಟ ಮಾಡುತ್ತೇನೆ. ಹಿಂದಿನಿಂದಲೂ ಪಕ್ಷ ಸಂಘಟನೆ ಮಾಡ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top