ಸಮಾಚಾರ

ಮತ್ತೊಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ ವಾಟಾಳ್ ನಾಗರಾಜ್.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮತ್ತೊಮ್ಮೆ ಕರ್ನಾಟಕ ಬಂದ್’ಗೆ ಕರೆ ನೀಡಿದ್ದಾರೆ.. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಕೂಗುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕವನ್ನು ಒಡೆಯಲು ಯತ್ನಿಸುತ್ತಿರುವ ಇಂತಹ ಅತೃಪ್ತರ ವಿರುದ್ಧ ಪ್ರತಿಭಟನೆಗೆ ಕನ್ನಡಪರ ಹೋರಾಟಗಾರರು ಮುಂದಾಗಿದೆ. ಆಗಸ್ಟ್ ಕೊನೆಯ ವಾರದಲ್ಲಿ ಕರ್ನಾಟಕ ಬಂದ್ ಮಾಡುವುದಾಗಿ ಹೇಳಿದ್ದಾರೆ.

 

 

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ವಾಟಾಳ್ ನಾಗರಾಜ್ “ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂದು ಆಗ್ರಹಿಸುವವರನ್ನು ಕನ್ನಡ ಒಕ್ಕೂಟ ಖಂಡಿಸುತ್ತದೆ.. ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಬೇಡಿಕೆಯನ್ನು ಖಂಡಿಸಿ ಕನ್ನಡ ಒಕ್ಕೂಟ ಕರ್ನಾಟಕ ಬಂದ್ ನಡೆಸುತ್ತದೆ.” ಎಂದು ಹೇಳಿದ್ದಾರೆ.

ಮಾತು ಮುಂದುವರೆಸಿದ ಅವರು “ಪ್ರತ್ಯೇಕ ರಾಜ್ಯ ಮಾಡಬಾರದು ಎಂದು ಸರ್ಕಾರಕ್ಕೆ ಕನ್ನಡ ಒಕ್ಕೂಟದಿಂದ ಮನವಿ ಸಲ್ಲಿಸಲಾಗುತ್ತದೆ. ಜುಲೈ 18ರಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗಳ ಎದುರು ಕನ್ನಡ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ, ಅದರ ಜೊತೆಗೆ ಆಗಸ್ಟ್ ತಿಂಗಳಿನ ಕೊನೆ ವಾರದಲ್ಲಿ ಕರ್ನಾಟಕ ಬಂದ್ ಆಚರಣೆ ಮಾಡಲಾಗುತ್ತದೆ” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top