ಸಿನಿಮಾ

ಅನಂತಕುಮಾರ್ ಹೆಗಡೆಗೆ ಕೈತಪ್ಪುತ್ತಾ ಲೋಕಸಭಾ ಚುನಾವಣೆಯ ಟಿಕೆಟ್.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಅನಂತಕುಮಾರ್ ಹೆಗಡೆ ಅವರಿಗೆ 2019ರ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪುವ ಭೀತಿ ಉಂಟಾಗಿದ್ದು, ತಮ್ಮ ಆತಂಕವನ್ನು ನಿನ್ನೆ ಎಂ.ಕೆ.ಹುಬ್ಬಳ್ಳಿಯಲ್ಲಿ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

 

 

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಕಿತ್ತೂರು ವಿಧಾಸಭಾ ಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡನಗೌಡರ ಅಭಿನಂದನಾ ಸಮಾರಂಭದಲ್ಲಿ ಅನಂತಕುಮಾರ್ ಹೆಗಡೆ ಕೂಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಯೋಗ್ಯತೆ ನೋಡಿ ಜನರು ವೋಟ್ ನೀಡಿಲ್ಲ. ಬದಲಿಗೆ ಪ್ರೀತಿ, ವಿಶ್ವಾಸದ ಮೇಲೆ ಮತ ಕೊಟ್ಟಿದ್ದಿರಿ. ಬಿಜೆಪಿ ಪಕ್ಷದ ಮೇಲಿನ ಬದ್ಧತೆ ಇಲ್ಲಿಯ ತನಕ ತಂದು ನಿಲ್ಲಿಸಿದೆ. 5 ಭಾರೀ ಲೋಕಸಭಾ ಸದಸ್ಯ ಮಾಡಿದ್ದೀರಿ ಇದಕ್ಕಿಂತ ಹೆಚ್ಚೆನು ಬೇಕು. 5 ಬಾರಿ ವೋಟಿನ ಗೌರವ ಕಡಿಮೆ ಆಗದಂತೆ ನೋಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುವುದು ಗೊತ್ತಿಲ್ಲ. ಆದರೆ ಬಿಜೆಪಿಯಿಂದ ಯಾರೇ ಸ್ಪರ್ಧೆ ಮಾಡಿದರು ಗೆಲ್ಲಬೇಕು. ದೇಶಕ್ಕೆ ಬಿಜೆಪಿ ಅನಿವಾರ್ಯವಾಗಿದೆ ಎಂದು ಅನಂತಕುಮಾರ್ ಹೆಗಡೆ ತಮಗೆ ಟಿಕೆಟ್ ಸಿಗುತ್ತೋ, ಇಲ್ಲವೋ ಎಂಬ ಆತಂಕವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ. ಅನಂತ್ ಕುಮಾರ ಈ ರೀತಿ ಹೇಳಲು ಕಾರಣವೇನು ಎಂಬುದೇ ಈಗ ಎಲ್ಲರ ಪ್ರಶ್ನೆ ಆಗಿದೆ.

ಒಂದು ವೇಳೆ ಅನಂತ್ ಕುಮಾರ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದರೆ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದೇ ಈಗ ಕುತೂಹಲ ಮೂಡಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top