ಸಮಾಚಾರ

ವಾಜಪೇಯಿ ಅಂತಿಮ ದರ್ಶಕ್ಕೆ ತೆರಳಿದ್ದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ

ನಿನ್ನೆ ಸಂಜೆ ಅನಾರೋಗ್ಯದಿಂದ ನಿಧನರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ಮೂಲಗಳ ಮಾಹಿತಿ ಪ್ರಕಾರ ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ವಿರೋಧ ವ್ಯಕ್ತಪಡಿಸಿರುವ ಗುಂಪು ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ತಿಳಿದು ಬಂದಿದೆ.

 

 

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ತೆರಳಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರಿಗೆ ಕೊನೆಗೂ ದರ್ಶನ ಪಡೆಯುವ ಭಾಗ್ಯ ಸಿಗಲಿಲ್ಲ ಎಂದು ತಿಳಿದು ಬಂದಿದೆ. ಹಲ್ಲೆ ಮಾಡಿರುವ ಗುಂಪಿನಲ್ಲಿ ಯಾರು ಇದ್ದರು ಎಂಬುದರ ಬಗ್ಗೆ ಇನ್ನಷ್ಟೇ ತನಿಖೆಯ ಬಳಿಕ ಗೊತ್ತಾಗಬೇಕಿದೆ.

ಈ ಹಿಂದೆ ಕೂಡ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ನಡೆದಿತ್ತು. ಕಳೆದ ಜುಲೈ ನಲ್ಲಿ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಭಾರತೀಯ ಜನತಾ ಪಾರ್ಟಿಯ ಯುವ ಘಟಕದ ಕಾರ್ಯಕರ್ತರು ಹಲ್ಲೆ ಮಾಡಿದ್ದ ಘಟನೆ ನಡೆದಿತ್ತು. ಇದಾದ ಬಳಿಕ ಇಂದು ಗುಂಪೊಂದು ಅವರ ಮೇಲೆ ಹಲ್ಲೆ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top