ಸಮಾಚಾರ

ಮಳೆರಾಯನ ಮರಣ ಮೃದಂಗಕ್ಕೆ ಮಿಡಿಯಿತು ಎಬಿಡಿ ವಿಲಿಯರ್ಸ್ ಹೃದಯ.

ವರುಣ ಆರ್ಭಟಕ್ಕೆ ಕೇರಳ ಅಕ್ಷರಶಃ ಬೆಚ್ಚಿಬಿದ್ದಿದೆ, ದೇವರನಾಡು ಎಂದು ಕರೆಸಿಕೊಳ್ಳುವ ಕೇರಳದ ಮೇಲೆ ಯಾಕೋ ದೇವರಿಗೆ ಸಿಟ್ಟು ಬಂದಿದೆ. ಎತ್ತ ನೋಡಿದರೂ ಮಳೆ ನೀರು, ಮನೆ, ಜಾನುವಾರುಗಳನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟುತ್ತಿದೆ.. ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಅಲ್ಲೋಲ ಕಲ್ಲೋಲವಾಗಿರುವ ಕೇರಳದ ಪರಿಸ್ಥಿತಿಗೆ ದಕ್ಷಿಣ ಆಫ್ರಿಕಾದ ಸ್ಪೋಟಕ ಆಟಗಾರ ಎಬಿಡಿ ವಿಲಿಯರ್ಸ್ ​ ಬೇಸರ ವ್ಯಕ್ತಪಡಿಸಿದ್ದಾರೆ.. ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಪ್ರವಾಹದಿಂದ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ರಕ್ಷಿಸುವಂತೆ ಎಬಿಡಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ..

 

 

ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಡಿವಿಲಿಯರ್ಸ್ “ಕೇರಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದಲ್ಲಿ ಸಿಲುಕಿ ಒದ್ದಾಡುತ್ತಿರುವ ಜನರು ಆದಷ್ಟು ಬೇಗ ಸುರಕ್ಷಿತವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ., ಭೀಕರ ಪ್ರವಾಹದಿಂದ ನೂರಕ್ಕೂ ಹೆಚ್ಚು ಜನ ಮರಣ ಹೊಂದಿದ್ದು 200,000 ಕ್ಕೂ ಅಧಿಕ ಮಂದಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇದು ತುಂಬಾ ಭಯಾನಕ ವಿಚಾರ” ಎಂದು ಟ್ವೀಟ್ ಮಾಡಿದ್ದಾರೆ.

ಕೇರಳ ಪ್ರವಾಹ ಅಪ್ ಡೇಟ್:
ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರವನ್ನು ಹೆಚ್ಚಿಸುತ್ತಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಮಳೆಯಿಂದಾಗಿ ಬರೊಬ್ಬರಿ 106 ಮಂದಿ ಸಾವಿಗೀಡಾಗಿದ್ದು, ಇದರೊಂದಿಗೆ ಸವಾನಿ ಸಂಖ್ಯೆ 324ಕ್ಕೆ ಏರಿಕೆಯಾಗಿದೆ.ಸುಮಾರು 2 ಲಕ್ಷ ಮಂದಿ ಪ್ರವಾಹ ಸಂತ್ರಸ್ಥರ ಕ್ಯಾಂಪ್ ಗಳಲ್ಲಿದ್ದಾರೆ. ಕೇರಳದ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು ರಾಷ್ಟ್ರೀಯ ವಿಪತ್ತು ದಳದ 35 ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಲಿವೆ. ಪ್ರಧಾನಿ ನರೇಂದ್ರ ಮೋದಿ 500ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top