ಸಮಾಚಾರ

ಕುತೂಹಲ ಸೃಷ್ಟಿಸಿರುವ ಡಾಲಿ ಧನಂಜಯ್ ತೆಲುಗು-ಕನ್ನಡ ಭೈರವ ಗೀತಾ’ ಸಿನಿಮಾದ ಈ ಹೊಸ ಪೋಸ್ಟರ್,ಪೋಸ್ಟರ್ ಒಳಗಿದೆ.

ಸೂರಿ ನಿರ್ದೇಶನದ ಟಗರು ಚಿತ್ರದಲ್ಲಿ ಡಾಲಿಯಾಗಿ ಅಬ್ಬರಿಸಿರುವವರು ಧನಂಜಯ್. ಟಗರು ಚಿತ್ರದ ನಂತರ ಧನಂಜಯ್ ನಿಂತಲ್ಲಿ ಕುಂತಲ್ಲಿ ಸುದ್ದಿಯ ಸುಗ್ಗಿ. ಬಹುಶಃ ಅಂಥಾದ್ದೊಂದು ಪಾತ್ರವನ್ನು ಧನಂಜಯ್ ನಿರ್ವಹಿಸಿದ್ದಾರೆಂದು ಯಾರೂ ಊಹಿಸಿರಲಿಕ್ಕಿಲ್ಲ. ಆದರೆ ಸೂರಿ ರೂಪಿಸಿರೋ ಆ ಪಾತ್ರದಲ್ಲಿನ ಅಬ್ಬರದ ನಟನೆಯ ಮೂಲಕ ಧನಂಜಯ್ ಸಿನಿಮಾ ಜೀವನದ ಮತ್ತೊಂದು ಆಯಾಮದತ್ತ ಹೊರಳಿಕೊಳ್ಳೋ ಲಕ್ಷಣಗಳೂ ದಟ್ಟವಾಗಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ರಾಮ್ ಗೋಪಾಲ್ ವರ್ಮಾ ಅವರ ಗರಡಿಯಲ್ಲಿ ಪಳಗಿದ ಸಿದ್ದಾರ್ಥ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ನಟಿಸುತ್ತಿದ್ದಾನೇ.

ಧನಂಜಯ್ ಅಭಿನಯದ ತೆಲುಗಿನ ಭೈರವ ಗೀತಾ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಅಲ್ಲದೇ ಡಾಲಿ ಭೈರವನ ಮೋಷನ್ ಪೋಸ್ಟರ್ ಇತ್ತೀಚಿಗೆ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿತ್ತು ಈಗ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ ಎಂದು ತಿಳಿದು ಬಂದಿದೆ.

ಈ ಪೋಸ್ಟರ್​​​ನಲ್ಲಿ ಧನಂಜಯ್ ಅವರು ವಿಭಿನ್ನವಾಗಿ ಕಾಣಿಸಿದ್ದು ಪೋಸ್ಟರ್ ಸೊಗಸಾಗಿ ಮೂಡಿಬಂದಿದೆ ಎಂದು ತಿಳಿದು ಬಂದಿದೆ. ಪೋಸ್ಟ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು. ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ತಿಳಿದು ಬಂದಿದೆ.

 

ಚಿತ್ರವನ್ನು ರಾಮ್​ಗೋಪಾಲ್ ವರ್ಮಾ ಗರಡಿಯಲ್ಲಿ ಪಳಗಿದ ಸಿದ್ದಾರ್ಥ ನಿರ್ದೇಶಿಸುತ್ತಿದ್ದಾರೆ ಹಾಗು ರಾಮ ಗೋಪಾಲ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ಟ್ರೇಲರ್ ಸದ್ಯದಲ್ಲೇ ರಿಲೀಸ್ ಆಗಲಿದೆ ಎಂದು ರಾಮ್​​ಗೋಪಾಲ್ ವರ್ಮಾ ತಮ್ಮ ಟ್ವಿಟರ್​​ನಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top