fbpx
ಸಮಾಚಾರ

ಮಳೆಯ ಬೆನ್ನಲ್ಲೇ ಕೊಡಗಿನಲ್ಲಿ ಭೂಕಂಪವಾಗುತ್ತಾ? ಇಲ್ಲಿದೆ ಸತ್ಯಂಶ

ಒಂದು ಸ್ವಲ್ಪವೂ ಕರುಣೆಯಿಲ್ಲದೇ ಸತತವಾಗಿಅಬ್ಬರಿಸುತ್ತಿರುವ ಮಳೆರಾಯ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಸಿ ಮರಣ ಮೃದಂಗ ಬಾರಿಸುತ್ತಿದ್ದಾನೆ. ಕೊಡಗು ಸೇರಿದಂತೆ ರಾಜ್ಯದ ವಿವಿದೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ. ಭಾರಿ ಬಿರುಗಾಳಿ, ಮಹಾಮಳೆ ಮತ್ತು ಭೂಕುಸಿತದಲ್ಲಿ ಹತ್ತಕ್ಕೂ ಹೆಚ್ಚುಮಂದಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದ್ದು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈವರೆಗೂ 500ಕ್ಕೂ ಹೆಚ್ಚು ಮನೆಗಳು ಕುಸಿದಿವೆ ಎಂದು ವರದಿಯಾಗಿದೆ. ಎಲ್ಲೆಂದರಲ್ಲಿ ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಸಾವಿರಾರು ಜನರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ.

 

 

ಹೀಗಿರುವಾಗಲೂ ಕನಿಕರವಿಲ್ಲದ ಕೆಲ ಕಿಡಿಗೇಡಿಗಳು ‘ಕೊಡಗಿನಲ್ಲಿ ಭೂಕಂಪವಾಗಲಿದೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಈಗಲೇ ಭಯಬೀತರಾಗಿ ತತ್ತರಿಸಿರುವ ಕೊಡಗಿನ ಜನರನ್ನು ಮತ್ತಷ್ಟು ಚಿಂತೆಗೆ ಈಡುಮಾಡಿವೆ. ಇದನ್ನು ಗಾಬರಿಗೊಂಡ ಜನರು ಮತ್ತಷ್ಟು ಭಯಭೀತರಾಗಿದ್ದರು. ಆದರೆ ಈ ಸುದ್ದಿ ಸುಳ್ಳು ಎಂಬುದನ್ನು ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದು ಕೊಡಗಿನ ಜನ ಈ ವಿಚಾರದಲ್ಲಾದರೂ ನಿರಾಳರಾಗಿದ್ದಾರೆ.

“ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ. ” ಎಂದು ಸಿಎಂ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top