ಸಮಾಚಾರ

ಗಂಗೆಯಲ್ಲಿ ಲೀನರಾದ ಮಾಜಿ ಪ್ರಧಾನಿ ವಾಜಪೇಯಿ- ವಿಡಿಯೋ.

ದಿವಂಗತ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿರ ಚಿತಾಭಸ್ಮವನ್ನು ಇಂದು ಗಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಅವರ ಪುತ್ರಿ ನಮಿತಾ ಕೌಲ್‌ ಭಟ್ಟಾಚಾರ್ಯ ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜಿಸಿದ್ದಾರೆ. ಮೆರವಣಿಗೆ ಮೂಲಕ ಚಿತಾಭಸ್ಮವನ್ನು ತೆಗೆದುಕೊಂಡು ಹೋಗಲಾಯಿತು, ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

 

 

ವಾಜಪೇಯಿ ಅವರ ಚಿತಾಭಸ್ಮವನ್ನು ದೇಶದ ಎಲ್ಲಾ ಪವಿತ್ರನದಿಗಳಲ್ಲೂ ವಿಸರ್ಜಿಸಲಾಗುವುದು. ಮೊದಲಿಗೆ ಭಾನುವಾರ ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.. ಮಂಗಳವಾರ ಲಕ್ನೋದಲ್ಲಿನ ಗೋಮತಿ ನದಿಯಲ್ಲಿ ವಿಸರ್ಜನೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಗೃಹಸಚಿವ ರಾಜನಾಥ್‌ ಸಿಂಗ್‌, ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯಾನಾಥ್, ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರ ಚಿತಾಭಸ್ಮ ಕಳಸ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಅಸ್ಥಿಯನ್ನು ಹರಿದ್ವಾರದ ‘ಪ್ರೇಮ್ ಆಶ್ರಮಕ್ಕೆ’ ತಂದು ಬಳಿಕ ಗಂಗಾ ನದಿಯಲ್ಲಿ ವಿಸರ್ಜಿಸಲಾಯಿತು.ಈ ವೇಳೆ ವಾಜಪೇಯಿ ಮೊಮ್ಮಗಳು ನಿಹಾರಿಕ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top