fbpx
ಸಮಾಚಾರ

ಪ್ರಧಾನಿ ಮೋದಿ ವಿರುದ್ಧ ಕೊಡಗಿನ ಸಂತ್ರಸ್ತರ ಆಕ್ರೋಶ- ಪ್ರತಾಪ್ ಸಿಂಹ ಎದುರು ನಿರಾಶ್ರಿತರ ಸಿಟ್ಟು .

ಒಂದು ಸ್ವಲ್ಪವೂ ಕರುಣೆಯಿಲ್ಲದೇ ಸತತವಾಗಿಅಬ್ಬರಿಸುತ್ತಿರುವ ಮಳೆರಾಯ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಸಿ ಮರಣ ಮೃದಂಗ ಬಾರಿಸುತ್ತಿದ್ದಾನೆ. ಕೊಡಗು ಸೇರಿದಂತೆ ರಾಜ್ಯದ ವಿವಿದೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ.. ಊರಿಗೂರೇ ಪ್ರವಾಹ, ಮಳೆ , ಭೂಕುಸಿತದಿಂದ ಕೊಚ್ಚಿಹೋಗಿ ರಾತ್ರಿ ಹಗಲಾಗೋದರೊಳಗೆ ಎಲ್ಲ ಕಳೆದುಕೊಂಡು ಜನ ಬೀದಿಗೆ ಬಂದು ನಿಂತಿದ್ದಾರೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ರಾಜ್ಯ ಸರ್ಕಾರ, ರಾಜ್ಯದ ಜನತೆ, ಚಿತ್ರರಂಗ ಸೇರಿದಂತೆ ಅನೇಕರು ಸ್ಪಂದಿಸಿದ್ದಾರೆ.. ಆದರೆ ಕೇಂದ್ರ ಸರ್ಕಾರವಾಗಲೇ ಅದರ ಸಚಿವರುಗಳಾಗಲಿ ಇತ್ತ ಗಮನ ಹರಿಸುತ್ತಿಲ್ಲ, ಎಂದು ಕೊಡಗಿನ ಸಂತ್ರಸ್ತರು ಸಿಟ್ಟು ಹೊರಹಾಕಿದ್ದಾರೆ..

 

 

ಮೋದಿ ವಿರುದ್ಧ ಸಂತ್ರಸ್ತರ ಆಕ್ರೋಶ:
ಕೊಡಗಿನ ಪ್ರವಾಹಕ್ಕೆ ತುತ್ತಾಗಿರುವ ಸಂತ್ರಸ್ತರ ಆಕ್ರೋಶ, ಸಿಟ್ಟು ಈಗ ಪ್ರಧಾನ ಮಂತ್ರಿ ಮೋದಿಯತ್ತ ತಿರುಗಿದೆ.. “ಕರ್ನಾಟಕದವರು ನಾವು ಮನುಷ್ಯರಲ್ಲವಾ? ನಾವು ನಿಮಗೆ ವೋಟ್ ಹಾಕಿಲ್ಲವಾ?” ಎಂಬಿತ್ಯಾದಿಯಾಗಿ ಮೋದಿ ವಿರುದ್ಧ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪ್ರಧಾನಿ ಮೋದಿ ಕೇರಳಕ್ಕೆ ಹೋಗಿ ಬಂದರು, ಅಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, 500 ಕೋಟಿ ಪರಿಹಾರ ಘೋಷಣೆ ಮಾಡಿದರು, ಆದರೆ ಅಪ್ಪಿತಪ್ಪಿಯೂ ಕೊಡಗಿನ ಪ್ರವಾಹದ ಬಗ್ಗೆ ಸಣ್ಣ ಪ್ರತಿಕ್ರಿಯೆಯನ್ನು ನೀಡಿಲ್ಲ ಯಾಕೆ? ನಾವು ಅಂದ್ರೆ ಅಷ್ಟೊಂದು ಕೇರ್ ಲೆಸ್ಸಾ?ಯಾಕೆ ನಮಗೆ ತಾರತಮ್ಯ ಮಾಡುತ್ತಿದ್ದಾರೆ? ” ಅಂತ ಸಂಸದ ಪ್ರತಾಪ್ ಸಿಂಹ ಎದುರು ಪ್ರವಾಹ ಪೀಡಿತರು ಸಿಟ್ಟನ್ನ ಹೊರಹಾಕಿದ್ದಾರೆ.

ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರತಾಪ್ ಸಿಂಹ ಇವತ್ತು ಪ್ರವಾಹ ಪೀಡಿತರ ಬಳಿಗೆ ಭೇಟಿ ಕೊಟ್ಟಿದ್ದಂತಹ ಸಂಧರ್ಭದಲ್ಲಿ ಅವರ ಎದುರು ಸಂತ್ರಸ್ತರು ಮೋದಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

ಕೊಡಗು ಮಳೆ ಅಪ್ ಡೇಟ್:
ಕೊಡಗು ಜಿಲ್ಲೆಯಲ್ಲಿ ಬಿಡುವಿಲ್ಲದೇ ಧಾರಾಕಾರ ಮಳೆ ಮುಂದುವರಿದಿದ್ದು ಮಹಾ ಮಳೆಗೆ ಇಡೀ ಕೊಡಗು ಜಿಲ್ಲೆಯೇ ಅಕ್ಷರಶಃ ಕೊಚ್ಚಿಹೋಗಿದೆ. ಭಾರಿ ಬಿರುಗಾಳಿ, ಮಹಾಮಳೆ ಮತ್ತು ಭೂಕುಸಿತದಲ್ಲಿ 10 ಮಂದಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದ್ದು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈವರೆಗೂ 500ಕ್ಕೂ ಹೆಚ್ಚು ಮನೆಗಳು ಕುಸಿದಿವೆ ಎಂದು ವರದಿಯಾಗಿದೆ.

ಕೊಡಗು ಜಿಲ್ಲೆಯಲ್ಲಿ ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಾಜ್ಯ ಹೆದ್ದಾರಿ ಪೂರ್ತಿ ಕೊಚ್ಚಿ ಹೋಗಿದೆ. ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರ ಸ್ವಲ್ಪವೂ ಕಡಿಮೆ ಆಗಿಲ್ಲವಾದ್ದರಿಂದ ಈ ಎರಡೂ ಘಾಟಿ ಹೆದ್ದಾರಿಗಳಲ್ಲಿ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.ರಸ್ತೆಗಳು ನೀರು ತುಂಬಿ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಳೆದುಕೊಂಡಿವೆ. ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಗ್ರಾಮಗಳು ಕಗ್ಗತಲಲ್ಲಿ ಮುಳುಗಿವೆ. ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂತ್ರಸ್ತ ಜನರು ರಕ್ಷಣೆಗಾಗಿ ಎದುರು ನೋಡುತ್ತಿದ್ದಾರೆ.

ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಬರಲು ಹಣ ಹಾಗೂ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ರಾಜ್ಯದ ವಿವಿಧ ಸಂಘಟನೆಗಳು ಮುಂದಾಗಿವೆ. ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲು ಸಹಾಯ ಮಾಡುವಂತೆ ಕೊಡವ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ‘ಡೊನೆಟ್ ಕೊಡಗು’ ಎನ್ನವ ಹೆಸರಿನಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top