fbpx
ಸಮಾಚಾರ

ರಾಜಕೀಯಕ್ಕೆ ಎಂಟ್ರಿ ಕೊಡಲು ತಯಾರಾದ ಗೌತಮ್ ಗಂಭೀರ್- ಯಾವ ಪಕ್ಷದಿಂದ ಗೊತ್ತಾ?

ಕ್ರಿಕೆಟ್ ಮೈದಾನದಲ್ಲಿ ತಮ್ಮ ಜವಾಬ್ದಾರಿಯುತ ಆಟದಿಂದಲೇ ಹೆಚ್ಚಿನ ಗಮನ ಸೆಳೆದಿದ್ದ ದೆಹಲಿಯ ಗೌತಮ್ ಗಂಭೀರ್ ರಾಜಕೀಯ ಎಂಟ್ರಿ ಕೊಡಲು ತಯಾರಾಗಿದ್ದಾರೆ ಎಂಬ ಹಾಟ್ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರೋ ಗಂಭೀರ್ ರಾಜಕೀಯದತ್ತ ಮುಖ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.

 

 

ಮೂಲಗಳ ಪ್ರಕಾರ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಗೌತಮ್ ಗಂಭೀರ್ ಕಣಕ್ಕಿಳಿಸಲು ಬಿಜೆಪಿ ಸಿದ್ದತೆ ನಡೆಸಿದೆ. ಇದಕ್ಕಾಗಿ ಗಂಭೀರ್ ಮನವೊಲಿಸಲು ದೆಹಲಿ ಬಿಜೆಪಿ ಘಟಕ್ಕೆ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ದೆಹಲಿ ಯುವ ಜನತೆಯನ್ನ ಬಿಜೆಪಿ ಹಿಡಿದಿಟ್ಟುಕೊಳ್ಳಲು ಸಜ್ಜಾಗಿದೆ. ಸದ್ಯ ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಆಡಳಿತ ನಡೆಸುತ್ತಿದೆ. 2015ರಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ಈ ಬಾರಿ ಗೆಲುವಿಗಾಗಿ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.

ಪ್ರಸ್ತುತ ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹಾಗೂ ಸಿಕ್ಸರ್ ಸಿದ್ದು ಖ್ಯಾತಿಯ ನವಜೋತ್ ಸಿಂಗ್ ಸಿದ್ದು ಆಗಲೇ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದು ಇದೀಗ ಅವರ ಹಾದಿಯನ್ನು ಗಂಭೀರ್ ಹಿಡಿಯಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.. ಟ್ವೆಂಟಿ-20 ಹಾಗೂ ಏಕದಿನ ವಿಶ್ವಕಪ್ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಗಂಭೀರ್, ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ತಂಡದಿಂದ ದೂರವಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top