ಸಮಾಚಾರ

ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದು ಪ್ರವಾಹ ಸಂತ್ರಸ್ತರಿಗೆ ಅವಮಾನಿಸಿದ ಸಚಿವ HD ರೇವಣ್ಣ.

ಧಾರಾಕಾರ ಮಳೆಗೆ ಕೊಚ್ಚಿ ಹೋಗುತ್ತಿರುವ ಕೊಡಗು ಅಕ್ಷರಶ ಕಂಗಾಲಾಗಿ ಹೋಗಿದೆ. ಕೊಡಗು ಸೇರಿದಂತೆ ರಾಜ್ಯದ ವಿವಿದೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ.. ಊರಿಗೂರೇ ಪ್ರವಾಹ, ಮಳೆ , ಭೂಕುಸಿತದಿಂದ ಕೊಚ್ಚಿಹೋಗಿ ರಾತ್ರಿ ಹಗಲಾಗೋದರೊಳಗೆ ಎಲ್ಲ ಕಳೆದುಕೊಂಡು ಜನ ಬೀದಿಗೆ ಬಂದು ನಿಂತಿದ್ದಾರೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ರಾಜ್ಯ ಸರ್ಕಾರ, ರಾಜ್ಯದ ಜನತೆ, ಚಿತ್ರರಂಗ, ಸ್ಟಾರ್ ನಟರ ಅಭಿಮಾನಿ ಸಂಘಗಳು ಸೇರಿದಂತೆ ಅನೇಕರು ಸ್ಪಂದಿಸಿದ್ದಾರೆ. ಆದ್ರೆ ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಬೇಕಿದ್ದ ಸಚಿವ HD.ರೇವಣ್ಣ ಅವ್ರ ಅಮಾನವೀಯ ವರ್ತನೆ ಜನರ ಕೆಂಗಣ್ಣಿಗೆ ಗುರಿಯಾಗಿದೆ.

 

 

ತಮ್ಮದೇ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಕೂಡ ಪ್ರವಾಹ ಭೀತಿ ಎದುರಾಗಿದ್ದು ನೂರಾರು ಜನ ನೆರೆ ಸಂತ್ರಸ್ತರು ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.. ಅವರ ಸಂಕಷ್ಟವನ್ನು ಆಲಿಸಿ, ಸಾಂತ್ವನ ನೀಡಿ, ಧೈರ್ಯ ನೀಡುವುದಕ್ಕೆಂದು ಅಲ್ಲಿಗೆ ತೆರಳಿದ್ದ ರೇವಣ್ಣ, ಅವರಿಗೆ ಬಿಸ್ಕೇಟ್ ಪ್ಯಾಕ್ ಗಳನ್ನು ನೀಡುವ ಬದಲು ಎಸೆದು ಅಮಾನವೀಯ ವರ್ತನೆ ತೋರಿದ್ದಾರೆ. ನಿನ್ನೆ ರಾತ್ರಿ ಭೇಟಿ ನೀಡಿದ್ದ ಸಚಿವ ಹೆಚ್‌.ಡಿ.ರೇವಣ್ಣ “ಸಂತ್ರಸ್ತರ ಬಳಿ ಹೋಗಿ ಅವರ ನೋವು ಆಲಿಸಿ, ಆಹಾರ ನೀಡಬೇಕಿತ್ತು ಆದರೆ ಬೇಕಾಬಿಟ್ಟಿಯಾಗಿ ಬಿಸ್ಕೆಟ್‌, ನೀರು ಎಸೆದು ಜನರ ಕೋಪಕ್ಕೆ ಕಾರಣವಾಗಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ 100 ಕೋಟಿ ಪರಿಹಾರವನ್ನು ಘೋಷಿಸಿದೆ.

ಕೊಡಗಿನಲ್ಲಿ ನಿಲ್ಲದ ಮಳೆರಾಯನ ಆರ್ಭಟ:
ಕೊಡಗು ಜಿಲ್ಲೆಯಲ್ಲಿ ಬಿಡುವಿಲ್ಲದೇ ಧಾರಾಕಾರ ಮಳೆ ಮುಂದುವರಿದಿದ್ದು ಮಹಾ ಮಳೆಗೆ ಇಡೀ ಕೊಡಗು ಜಿಲ್ಲೆಯೇ ಅಕ್ಷರಶಃ ಕೊಚ್ಚಿಹೋಗಿದೆ. ಭಾರಿ ಬಿರುಗಾಳಿ, ಮಹಾಮಳೆ ಮತ್ತು ಭೂಕುಸಿತದಲ್ಲಿ 10 ಮಂದಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದ್ದು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈವರೆಗೂ 845ಕ್ಕೂ ಹೆಚ್ಚು ಮನೆಗಳು ಕುಸಿದಿವೆ, ನಿರಾಶ್ರಿತರಿಗಾಗಿ 40ಕ್ಕೂ ಹೆಚ್ಚು ಗಂಜಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ವರದಿಯಾಗಿದೆ. 10ಕ್ಕೂ ಹೆಚ್ಚು ಗ್ರಾಮಗಳು ಖಾಲಿಯಾಗಿದೆ.

ಕೊಡಗು ಜಿಲ್ಲೆಯಲ್ಲಿ ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಾಜ್ಯ ಹೆದ್ದಾರಿ ಪೂರ್ತಿ ಕೊಚ್ಚಿ ಹೋಗಿದೆ. ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರ ಸ್ವಲ್ಪವೂ ಕಡಿಮೆ ಆಗಿಲ್ಲವಾದ್ದರಿಂದ ಈ ಎರಡೂ ಘಾಟಿ ಹೆದ್ದಾರಿಗಳಲ್ಲಿ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.ರಸ್ತೆಗಳು ನೀರು ತುಂಬಿ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಳೆದುಕೊಂಡಿವೆ. ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಗ್ರಾಮಗಳು ಕಗ್ಗತಲಲ್ಲಿ ಮುಳುಗಿವೆ. ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂತ್ರಸ್ತ ಜನರು ರಕ್ಷಣೆಗಾಗಿ ಎದುರು ನೋಡುತ್ತಿದ್ದಾರೆ.

ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಬರಲು ಹಣ ಹಾಗೂ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ರಾಜ್ಯದ ವಿವಿಧ ಸಂಘಟನೆಗಳು ಮುಂದಾಗಿವೆ. ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲು ಸಹಾಯ ಮಾಡುವಂತೆ ಕೊಡವ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ‘ಡೊನೆಟ್ ಕೊಡಗು’ ಎನ್ನವ ಹೆಸರಿನಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top