ಸಮಾಚಾರ

‘Mr. & Mrs.ರಾಮಾಚಾರಿ’ ಬಗ್ಗೆ ಯಾರಿಗೂ ಗೊತ್ತಿಲ್ಲದ ಹೊಸ ಕಥೆ ಹೇಳಿದ ಸಾಧುಮಹಾರಾಜ್.

ಕೆಲವು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಯಶ್ ಹಾಗು ರಾಧಿಕಾ ಪಂಡಿತ್ ಅಭಿನಯದ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಸಿನಿಮಾ ಭರ್ಜರಿ ಯಶಸ್ಸು ಕಂಡು ಸೂಪರ್ ಹಿಟ್ ಆಗಿತ್ತು. ಬಳಿಕ ಈ ಸಿನಿಮಾ ಹಲವು ಭಾಷೆಗಳಿಗೆ ರಿಮೇಕ್ ಹಾಗು ಡಬ್ಬಿಂಗ್ ಆಗಿತ್ತು. ಈ ಸಿನಿಮಾದಲ್ಲಿ ಅಭಿನಯ ಮಾಡಿದ್ದ ಹಾಸ್ಯ ನಟ ಸಾಧು ಕೋಕಿಲ ಅವರು ದ್ವಿತೀಯಾರ್ಧದಲ್ಲಿ ಪ್ರೇಕ್ಷಕರನ್ನು ನಕ್ಕು ನಲಿಸಿದ್ದರು.

ಇತ್ತೀಚಿಗೆ ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಸಿನಿಮಾ ಬಗ್ಗೆ ಮಾತನಾಡಿರುವ ಸಾಧು ಕೋಕಿಲ ಅವ್ರು ಸಿನಿಮಾದ ಬಗ್ಗೆ ಯಾರಿಗೂ ಗೊತ್ತಿರದ ಅಪರೂಪದ ವಿಷಯ ಬಗ್ಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

 

 

 

‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಸಿನಿಮಾದಲ್ಲಿ ಯಶ್ ಪಾತ್ರವನ್ನು ಸೃಷ್ಟಿ ಮಾಡಿದ್ದೆ ಸಾಧು ನಟ ಯಶ್ ಅವರಂತೆ. ಯಶ್ ಅವರು ಸಾಧುಕೋಕಿಲಾ ಅವರೇ ಬೇಕು ಎಂದು ಪಟ್ಟು ಹಿಡಿದು ಕುಳಿತ್ತಿದ್ದರಂತೆ. ಈ ಸಂಗತಿ ಇಲ್ಲಿಯವರೆಗೂ ಯಾರಿಗೂ ಗೊತ್ತಿರಲಿಲ್ಲ.  ಇತ್ತೀಚಿಗಷ್ಟೆ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡ ಕೋಗಿಲೆ ಕಾರ್ಯಕ್ರಮದಲ್ಲಿ ಸ್ವತಃ ಸಾಧು ಕೋಕಿಲಾ ಅವರೇ ಹೇಳಿಕೊಂಡಿದ್ದಾರೆ.

 

ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡ ಕೋಗಿಲೆ ಕಾರ್ಯಕ್ರಮದಲ್ಲಿ ಸ್ವತಃ ಸಾಧು ಕೋಕಿಲಾ ಈ ವಿಷ್ಯ ಹೇಳಿದ್ದು ಈ ವಾರಾಂತ್ಯದಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top