ಸಮಾಚಾರ

ಕರುನಾಡ ಜನತೆಯ ಹೃದಯ ವೈಶಾಲ್ಯತೆಯನ್ನು ಕೊಂಡಾಡಿದ ರಾಷ್ಟ್ರಪತಿ ರಮಾನಾಥ್ ಕೊವಿಂದ್.

ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಕೊಚ್ಚಿ ಹೋಗುತ್ತಿರುವ ಕೊಡಗು ಅಕ್ಷರಶ ಕಂಗಾಲಾಗಿ ಹೋಗಿದೆ. ಕೊಡಗು ಸೇರಿದಂತೆ ರಾಜ್ಯದ ವಿವಿದೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ.. ಊರಿಗೂರೇ ಪ್ರವಾಹ, ಮಳೆ , ಭೂಕುಸಿತದಿಂದ ಕೊಚ್ಚಿಹೋಗಿ ರಾತ್ರಿ ಹಗಲಾಗೋದರೊಳಗೆ ಎಲ್ಲ ಕಳೆದುಕೊಂಡು ಜನ ಬೀದಿಗೆ ಬಂದು ನಿಂತಿದ್ದಾರೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಕೇವಲ ಸರ್ಕಾರ ಮಾತ್ರವಲ್ಲದೆ ರಾಜ್ಯದ ಮೂಲೆಮೂಲೆಯಿಂದ ಜನರು ಸ್ವಯಂ ಪ್ರೇರಿತರಾಗಿ ಬಂದು ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸುತ್ತಿದ್ದು ಹೃದಯ ವೈಶಾಲತೆ ಮೆರೆಯುತ್ತಿದ್ದಾರೆ.. ಉಳಿದಂತೆ ಚಿತ್ರರಂಗದ ಕಲಾವಿದರು , ತಂತ್ರಜ್ಞರು ಮತ್ತು ನಟರ ಅಭಿಮಾನಿ ಸಂಘಗಳು ಸೇರಿದಂತೆ ಅನೇಕರು ಅದ್ಭುತವಾಗಿ ಸ್ಪಂದಿಸೋ ಮೂಲಕ ಕೊಡಗಿನ ಜನರ ಕಷ್ಟಕ್ಕೆ ಮುಗಿಬಿದ್ದು ಸಹಾಯ ಮಾಡುತ್ತಿದ್ದಾರೆ..

ಕನ್ನಡ ನಾಡಿನ ಜನರ ಈ ಮಟ್ಟಿನ ಔದಾರ್ಯತೆಯನ್ನು ಕಂಡು ಪ್ರತಿಯೊಬ್ಬರೂ ಶ್ಲಾಘಿಸುತ್ತಿದ್ದು ಇದೀಗ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಕನ್ನಡಿಗರ ಸಹಾಯ ಗುಣವನ್ನು ಕೊಂಡಾಡಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ಕನ್ನಡಿಗರ ಔದಾರ್ಯತೆಯನ್ನು ಶ್ಲಾಘಿಸಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಪ್ರಶಂಶಿಸಿರುವುದು ವಿಶೇಷ.

 

.
ರಾಷ್ಟ್ರಪತಿ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಿಂದ ಪೋಸ್ಟ್ ಆಗಿರುವ ಟ್ವೀಟ್ ಗಳು ಈ ರೀತಿ ಇವೆ.
“ರಾಷ್ಟ್ರಪತಿ ಕೋವಿಂದ್‍ರವರು ಕರ್ನಾಟಕದ ರಾಜ್ಯಪಾಲರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ರಾಜ್ಯದ ಕೊಡಗು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹದಿಂದ ಉಂಟಾದ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆಯ ಚೈತನ್ಯ ಶಕ್ತಿಯನ್ನು ಪ್ರಶಂಸಿಸಿದರು ಹಾಗೂ ಪರಿಸ್ಥಿತಿಯನ್ನು ಎದುರಿಸುವಲ್ಲಿ ಇಡೀ ರಾಷ್ಟ್ರದ ಜನತೆ ತಮ್ಮೊಂದಿಗೆ ಇದೆ ಎಂಬ ಭರವಸೆಯನ್ನು ನೀಡಿದರು.”

“ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದಾಗಿ ನಡೆಸುತ್ತಿರುವ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ವಿಪತ್ತು ನಿರ್ವಹಣಾ ಸಂಸ್ಥೆಗಳು, ಸಾರ್ವಜನಿಕರು, ರಾಜ್ಯ ಹಾಗೂ ಕೇಂದ್ರದ ಸಿಬ್ಬಂದಿಗಳ ಚುರುಕಿನ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.”

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top