fbpx
ಸಮಾಚಾರ

ಮುಂದಕ್ಕೆ ಹೋಗಿದ್ದ ವಯಸ್ಸಾದ ಅಂಬಿ ದಸರಾಗೆ ಬರ್ತಾರಂತೆ.

ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಮುಖ್ಯಭೂಮಿಕೆಯಲ್ಲಿರುವ ಕಾರಣಕ್ಕೆ ಆರಂಭಕ್ಕೂ ಮುಂಚೆಯೇ ಸಾಕಷ್ಟು ಹೆಸರು ಮಾಡಿದ್ದ ಚಿತ್ರ `ಅಂಬಿ ನಿಂಗ್ ವಯಸ್ಸಾಯ್ತೋ’. ಬಹು ವರ್ಷಗಳ ನಂತರ ರೆಬೆಲ್ ಸ್ಟಾರ್ ಅಂಬರೀಷ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವುದರಿಂದ ಚಿತ್ರದ ಮೇಲೆ ಒಂದಷ್ಟು ಕುತೂಹಲಗಳು ಮನೆ ಮಾಡಿವೆ. ಈಗಾಗಲೇ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಇಂಥಾ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದ ಬಿಡುಗಡೆ ಮತ್ತೊಮ್ಮೆ ಮುಂದಕ್ಕೆ ಹೋಗಿದೆ.

 

 

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಇದೆ ಆಗಸ್ಟ್ 24ರಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಅಂದು ಚಿತ್ರ ತೆರೆಕಾಣುತಿಲ್ಲ. ಎಲ್ಲರಿಗೂ ಗೊತ್ತಿರೋ ಹಾಗೆ ಕೊಡಗು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದೆ.. ಇಂಥಾ ಮಹಾಮಳೆಯ ನಡುವೆ ಹಾಗೇನಾದರೋ ಸಿನಿಮಾ ಬಿಡುಗಡೆ ಮಾಡಿದರೆ ಜನರು ಥಿಯೇಟರ್ ಗಳಿಗೆ ಬರುವುದು ಅಸಾಧ್ಯವಾಗುತ್ತದೆ.. ಐದಾರು ಜಿಲ್ಲೆಗಳಲ್ಲಿ ಇದೇ ವಾತಾವರಣ ಇರೋದ್ರಿಂದ ಕಲೆಕ್ಷನ್ ಮೇಲೆ ಪರಿಣಾಮ ಬೀಳಲಿದೆ. ಈ ಲೆಕ್ಕಾಚಾರದಿಂದಾಗಿ ಅಂಬಿ ನಿಂಗ್ ವಯಸ್ಸಯ್ತೋ’ ಒಳಗಂಡಂತೆ ಈ ತಿಂಗಳ ಕೊನೆಯಲ್ಲಿ ಬರಬೇಕಿದ್ದ ಎಲ್ಲಾ ಸಿನಿಮಾಗಳು ಮುಂದಕ್ಕೆ ಹೋಗಿವೇ.. ಮೂಲಗಳ ಪ್ರಕಾರ ಅಂಬಿ ಮುಖ್ಯ ಭೂಮಿಕೆಯ ‘ಅಂಬಿ ನಿಂಗ್ ವಯಸ್ಸಯ್ತೋ’ ಸಿನಿಮಾ ದಸರಾ ಹಬ್ಬಕ್ಕೆ ಬಿಡುಗಡೆಯಾಗಲಿದೆಯಂತೆ.

ಅಂದಹಾಗೆ ಕಿಚ್ಚ ಕ್ರಿಯೇಶನ್ಸ್ ಅರ್ಪಿಸಿ, ಕೆ.ಎಸ್.ಕೆ. ಶೋ ರೀಲ್ ಪ್ರೊಡಕ್ಷನ್ ಅಡಿಯಲ್ಲಿ ತಯಾರಾಗುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರವನ್ನು ಕಿಚ್ಚನ ಶಿಷ್ಯ ಗುರುದತ್ ಗಾಣಿಗ ಎಂಬ 26ರ ಪೋರ ನಿರ್ದೇಶಿಸುತ್ತಿದ್ದಾನೆ. ಈ ಚಿತ್ರವನ್ನು ಕಿಚ್ಚ ಸುದೀಪ್ ಮತ್ತು ಮಂಜುನಾಥ್ ಗೌಡ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಬರುವ ಅಂಬಿಯವರ ಪ್ಲಾಶ್ ಬ್ಯಾಕ್ ಸನ್ನಿವೇಶದಲ್ಲಿ ಸುದೀಪ್ ಗೆ ಜೋಡಿಯಾಗಿ ಅಂದ್ರೆ ಸುಹಾಸಿನಿಯವರ ಯವ್ವನದ ಪಾತ್ರದಲ್ಲಿ ಶ್ರುತಿ ಹರಿಹರನ್ ನಟಿಸುತ್ತಿದ್ದಾರೆ. ಈ ಚಿತ್ರ ತಮಿಳಿನಲ್ಲಿ ಸೂಪರ್ ಹಿಟ್ಟಾಗಿದ್ದ ಪವರ್ ಪಾಂಡಿ ಚಿತ್ರದ ರೀಮೇಕ್. ಆದರೆ ಒಟ್ಟಾರೆ ಕಥೆ ಮತ್ತು ಸನ್ನಿವೇಷಗಳನ್ನು ಇಲ್ಲಿನ ನೇಟಿವಿಟಿಗೆ ಒಗ್ಗಿಸಿಕೊಂಡು ಗುರುದತ್ ದೃಷ್ಯ ಕಟ್ಟಿದ್ದಾರಂತೆ. ಆರಂಭದಿಂದಲೂ ಸಾಕಷ್ಟು ವಿಶೇಷತೆಗಳನ್ನು ಹೊತ್ತು ತರುತ್ತಿರುವ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರವು ಆಗಸ್ಟ್ ಕೊನೆಯ ವಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಿದ್ದವಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top