ಸಮಾಚಾರ

ಕೊಹ್ಲಿ ಯಶಸ್ಸಿನ ಹಿಂದೆ ಇರುವ ಆ ಶಕ್ತಿ ಯಾರ್ ಗೊತ್ತಾ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಎಲ್ಲ ಸರಣಿಯಲ್ಲೂ ಮಿಂಚುತ್ತಾರೆ. ಸದ್ಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯಾವಳಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ 202 ಗೆಲುವನ್ನು ಭಾರತ ದಾಖಲಿಸಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಯಶಸ್ಸಿಗೆ ಯಾರು ಕಾರಣ ಎಂಬ ವಿಷಯವನ್ನು ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಅವರು ಮೂರನೇ ಟೆಸ್ಟ್ ಪಂದ್ಯದ ಗೆಲುವನ್ನು ಕೇರಳಕ್ಕೆ ಅರ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ತಮ್ಮ ಅಮೋಘ ಪ್ರದರ್ಶನದ ಕ್ರೆಡಿಟ್ ನ್ನು ಪತ್ನಿ ಅನುಷ್ಕಾ ಶರ್ಮಾ ಅವರಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

 

ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದ ವಿರಾಟ್ ಕೊಹ್ಲಿ ಅವರು ಮೊದಲ ಇನ್ನಿಂಗ್ಸ್ ನಲ್ಲಿ 97 ರನ್ ಗಳಿಸಿ ಔಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 103 ರನ್ ಗಳಿಸಿ ವೃತ್ತಿ ಜೀವನದ 23ನೇ ಶತಕ ಬಾರಿಸಿ ನಗೆ ಬೀರಿದ್ದರು. ಈ ಸಂಧರ್ಭದಲ್ಲಿ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಕೊಹ್ಲಿ ಪತ್ನಿ ಅನುಷ್ಕಾ ಅವ್ರು ಕೊಹ್ಲಿ ಬ್ಯಾಟಿಂಗ್ ಉದ್ದಕ್ಕೂ ಪ್ರೋತ್ಸಾಹ ನೀಡುತ್ತಲೇ ಬಂದು. ಪತ್ನಿಯನ್ನು ಖುಷಿ ಮಾಡಲು ಕೊಹ್ಲಿ ಬೌಂಡರಿ ಮೇಲೆ ಬೌಂಡರಿ ಬಾರಿಸಿ ಇಂಗ್ಲೆಂಡ್ ಬೌಲರ್ ಗಳನ್ನೂ ಬೇವಳಿಸಿದರು.

ಎರಡನೇ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸುತ್ತಲೇ ಕೊಹ್ಲಿ ಅವರು ಮುದ್ದಿನ ಹೆಂಡತಿಗೆ ಫ್ಲೈಯಿಂಗ್ ಕಿಸ್ ನೀಡಿ ಗಮನಸೆಳೆದರು. ಅನುಷ್ಕಾ ನನಗೆ ಸಕಾರಾತ್ಮಕ ದಾರಿಯಲ್ಲಿ ನಡೆಯಲು ಪ್ರೋತ್ಸಾಹ ನೀಡಿ ನನ್ನ ಯಶಸ್ಸಿಗೆ ಬೆನ್ನೆಲುಬಾಗಿದ್ದಾಳೆ ಎಂದು ಕೊಹ್ಲಿ ಪಂದ್ಯದ ಬಳಿಕ ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top