fbpx
ಸಮಾಚಾರ

ಕೊಡಗು ಮರು ನಿರ್ಮಾಣಕ್ಕೆ ಕ್ರೇಜಿ ಸ್ಟಾರ್ ರವಿಚಂದ್ರನ್ ನೀಡಿದ 10 ಸೂಪರ್ ಡೂಪರ್ ಐಡಿಯಾಗಳು ಇವೆ ನೋಡಿ

ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಕೊಚ್ಚಿ ಹೋಗುತ್ತಿರುವ ಕೊಡಗು ಅಕ್ಷರಶ ಕಂಗಾಲಾಗಿ ಹೋಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ. ಊರಿಗೂರೇ ಪ್ರವಾಹ, ಮಳೆ , ಭೂಕುಸಿತದಿಂದ ಕೊಚ್ಚಿಹೋಗಿ ರಾತ್ರಿ ಹಗಲಾಗೋದರೊಳಗೆ ಎಲ್ಲ ಕಳೆದುಕೊಂಡು ಜನ ಬೀದಿಗೆ ಬಂದು ನಿಂತಿದ್ದಾರೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಕೇವಲ ಸರ್ಕಾರ ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಯಿಂದ ನೆರವು ಹರಿದು ಬರುತ್ತಿದೆ. ಸಿನಿಮಾ ನಟರು ತಮ್ಮ ಸಹಾಯ ಹಸ್ತ ಚಾಚಿದ್ದಾರೆ.

ಇನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ಅವ್ರು ಕೂಡ ಕೊಡಗಿಗೆ ಸಹಾಯ ಮಾಡಿದ್ದೂ. ಕೊಡಗು ಮರು ನಿರ್ಮಾಣಕ್ಕೆ ಕ್ರೇಜಿ ಸ್ಟಾರ್ ರವಿಚಂದ್ರನ್ 10 ಸೂಪರ್ ಡೂಪರ್ ಐಡಿಯಾಗಳು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾದರೆ ಅವರು ನೀಡಿರುವ 10 ಐಡಿಯಾ ಯಾವವು ಎಂಬುದನ್ನು ನೋಡೋಣ ಬನ್ನಿ.

1. ಶೂಟಿಂಗ್ ನಡೆಸುತ್ತಿರುವ ಚಿತ್ರಗಳು ತಲಾ 10,000 ರುಪಾಯಿಗಳನ್ನು ಪರಿಹಾರ ನಿಧಿಗೆ ನೀಡಬೇಕು.
2. ಸಿನಿಮಾಗಳ ಟಿಕೆಟ್ ದರವನ್ನು ಹೆಚ್ಚು ಮಾಡಿ, ಒಂದು ಪಾಲನ್ನು ಪರಿಹಾರ ನಿಧಿಗೆ ನೀಡಬೇಕು.
3. ಸಿನಿಮಾ ನಟರು ಸ್ವ ಇಚ್ಛೆಯಿಂದ ತಮ್ಮ ಕೈಲಾಗುವ ಮೊತ್ತವನ್ನು ಪರಿಹಾರ ನಿಧಿಗೆ ದೇಣಿಗೆ ನೀಡಬೇಕು. ತಾವು ಕೊಟ್ಟ ಮೊತ್ತವನ್ನು ಬಹಿರಂಗ ಮಾಡಲು ಹೋಗಬಾರದು.
4. ಯಾರ ಕೈಲಿ ಎಷ್ಟಾಗುತ್ತದೆಯೋ ಅಷ್ಟನ್ನೂ ಪರಿಹಾರ ನಿಧಿಗೆ ಹಾಕಬೇಕು.
5. ದೇವಸ್ಥಾನಗಳಿಗೆ ಕೊಡುಗೆ ನೀಡುವವರು ಒಂದೊಂದು ಕಾರ್ಯಕ್ಕೆ ಹಣ ಕೊಡುತ್ತಾರೆ. ಇಲ್ಲಿಯೂ ಹಾಗೆಯೇ ಮಾಡಿ, ಕೆಲವರು ಮನೆಗೆ, ಕೆಲವರು ರಸ್ತೆಗೆ, ಕೆಲವರು ಇತರ ವಸ್ತುಗಳಿಗೆ ಹಣ ಕೊಡಬೇಕು.

 

 

 

 

6. ಸಂತ್ರಸ್ತರಿಗೆ ಸರ್ಕಾರ ಸಮಾನವಾಗಿ ಭೂಮಿ ಹಂಚಿಕೆ ಮಾಡಬೇಕು. ಎಲ್ಲರೂ ಒಂದಾಗಿರುವಂತೆ, ಜಾತಿ, ಧರ್ಮಗಳ ಬೇಧವಿಲ್ಲದೇ ಎಲ್ಲರಿಗೂ ಒಳ್ಳೆಯ ಮನೆ ಕಟ್ಟಿಕೊಡಬೇಕು. ಅಲ್ಲಿ ಯಾವುದೇ ಧರ್ಮದ ದೇವಾಲಯ
ಇರಕೂಡದು. ಮಾನವ ಧರ್ಮವೊಂದೇ ಮುಖ್ಯವಾಗಬೇಕು.
7. ಟೋಲ್ ಗೇಟ್ ಸ್ಥಾಪಿಸಿ, ಆ ಹಾದಿಯಲ್ಲಿ ಹೋಗುವವರು ಕೊಡುವ ಹಣವನ್ನು ಪರಿಹಾರ ನಿಧಿಗೆ ಬಳಸಬೇಕು.
8. ಇಲ್ಲಿ ಕೋಟ್ಯಂತರ ರುಪಾಯಿಗಳ ಅಗತ್ಯವಿದೆ. ಅವನ್ನು ಸರ್ಕಾರ ಒಂದೇ ಕೊಡಲಿಕ್ಕಾಗುವುದಿಲ್ಲ. ಎಲ್ಲರೂ ಜೊತೆಗೆ ಕೈಗೂಡಿಸಬೇಕು.
9. ಮನೆ ಕಟ್ಟಿಕೊಡುವುದಕ್ಕಿಂತ ಬದುಕು ಕಟ್ಟಿಕೊಡುವುದು ಮುಖ್ಯ. ಅವರ ಸಂತೋಷ, ನೆಮ್ಮದಿಗಳನ್ನು ಮರಳಿಸುವುದು ಮುಖ್ಯ.

10. ಇಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳು ಮುಂದೆ ನೈಸರ್ಗಿಕ ವಿಕೋಪ ಸಂಭವಿಸಿದಾಗ ಏನು ಮಾಡಬಹುದು ಅನ್ನುವುದಕ್ಕೆ ಮಾದರಿ ಆಗಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top