ಸಮಾಚಾರ

ಮಾಜಿ ಶಾಸಕ ವೈಎಸ್‌ವಿ ದತ್ತಾ ಅವರ ಪತ್ನಿ ವಿಧಿವಶ- ಮಾಜಿ ಪ್ರಧಾನಿ ಸಾಂತ್ವನ.

ಕಡೂರಿನ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಅವರ ಪತ್ನಿ ನಿರ್ಮಲಾ‌ ಅವರು ಬುಧವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 60 ವರ್ಷ ವಯಸ್ಸಿನ ನಿರ್ಮಲಾ ಅವರು ಬೆಂಗಳೂರಿನಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇನ್ನದು ಬೆಳಗ್ಗೆ 10 ಗಂಟೆವರೆಗೆ ಬೆಂಗಳೂರಿನಲ್ಲಿರುವ ರಾಜಾಜಿನಗರದ ದತ್ತ ಅವರ ನಿವಾಸದಲ್ಲಿ ನಿರ್ಮಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.. ಗುರುವಾರ ಸಂಜೆ 4 ಗಂಟೆಗೆ ಕಡೂರು ತಾಲೂಕಿನ ಯಗಟಿ ಗ್ರಾಮದ‌ಲ್ಲಿರುವ ದತ್ತ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ..

ಅನಾರೋಗ್ಯ ಪೀಡಿತರಾಗಿದ್ದ ಅವರು ಕಳೆದ ಒಂದು ವರ್ಷದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು… ಇನ್ನು ನಗರದ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿ, ನಿರ್ಮಲಾ ಅವರ ಅಂತಿಮ ದರ್ಶನ ಪಡೆದು ದತ್ತಾ ಅವರಿಗೆ ಸಾಂತ್ವನ ಹೇಳಿದರು.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top