ಸಮಾಚಾರ

ಬಿಜೆಪಿ ಬಿಟ್ಟು ಕಾಂಗ್ರೆಸ್‍ನತ್ತ ಮುಖ ಮಾಡಿದ ಎಸ್.ಎಂ ಕೃಷ್ಣ ಮಗಳು- ಕಾರಣವೇನು ಗೊತ್ತಾ?

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪುತ್ರಿ ಶಾಂಭವಿ ಅವರು ಬಿಜೆಪಿ ಪಕ್ಷವನ್ನು ಸೇರದೆ ಕಾಂಗ್ರೆಸ್ ಪಕ್ಷದ ಮೂಲಕ ರಾಜಕಾರಣಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ದಟ್ಟವಾಗಿ ಹರಡಿಕೊಂಡಿದೆ. ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷವನ್ನು ಹೊಗಳಿ ಜೀವನ ಚರಿತ್ರೆ ಪುಸ್ತಕ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಪುಸ್ತಕ ಬಿಡುಗಡೆಯಾದ ಬಳಿಕ ಬಿಜೆಪಿ ಪಕ್ಷಕ್ಕೆ ಮುಜುರಗ ಆಗಬಾರದು ಎಂದು ಪುತ್ರಿ ಶಾಂಭವಿ ಬಿಜೆಪಿ ಪಕ್ಷವನ್ನು ಸೇರೋದಿಲ್ಲವಂತೆ. ಇದೆ ವೇಳೆ ಕೃಷ್ಣ ಅವರು ಕೂಡ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಲಿದ್ದಾರೆ.

ಐದು ದಶಕಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಕೆಲಸ ಮಾಡಿದ್ದರು. 2017ರ ಮಾರ್ಚ್‌ನಲ್ಲಿ ಅವರು ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಅಸಲಿಗೆ ಎಸ್‌.ಎಂ.ಕೃಷ್ಣ ಅವರಿಗೆ ಬಿಜೆಪಿ ಪಕ್ಷದ ಮೇಲೆ ಅಷ್ಟೇನೂ ಹಿಡಿತವಿಲ್ಲ. ಜೊತೆಗೆ ಅವರಿಗೆ ನಿರೀಕ್ಷಿಸಿದ ಹುದ್ದೆಯೂ ಸಿಕ್ಕಿಲ್ಲ. ಒಂದು ರೀತಿಯಲ್ಲಿ ಎಸ್‌.ಎಂ.ಕೃಷ್ಣ ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿದ್ದ ರಹಸ್ಯವಾಗಿದೆ. ಹಾಗಾಗಿಯೇ ಮಗಳು ಶಂಭವಿ ಕಾಂಗ್ರೆಸ್ ಮೂಲಕವೇ ರಾಜಕೀಯ ಆರಂಭಿಸಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ತಂದೆ ಬಿಜೆಪಿಯಲ್ಲಿರುವಾಗ ಮಗಳು ಕೂಡ ಬಿಜೆಪಿಯ ಮೂಲಕವೇ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆಎಂದೇ ಎಲ್ಲರೂ ತಿಳಿದುಕೊಂಡಿದ್ದರು,. ಆದರೆ ಈ ವಿಚಾರದಲ್ಲಿ ಬಿಗ್ ಟ್ವಿಸ್ಟ್ ಕೊಟ್ಟಿರೋ ಶಾಂಭವಿ ಕಾಂಗ್ರೆಸ್ ಪಕ್ಷದಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡೋದು ಬಹುತೇಕ ಖಚಿತವಾಗಿದೆ.. ಇಷ್ಟೇ ಅಲ್ಲದೇ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಕೂಡ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top