ಶ್ರಾವಣ ಮಾಸದ ಮುಖ್ಯವಾದ ಹಬ್ಬಗಳಲ್ಲಿ ಒಂದಾಗಿರುವ ವರಮಹಾಲಕ್ಷ್ಮಿ ಹಬ್ಬವು ಇಂದು ಆಗಸ್ಟ್ 24, ಶುಕ್ರವಾರದಂದು ನಡೆಯುತ್ತಿದೆ. ಮನೆಗೆ ಸಂಪತ್ತು, ಸಮೃದ್ಧಿ ಕರುಣಿಸು ಎಂದು ದೇವಿ ಲಕ್ಷ್ಮಿಯನ್ನು ಪ್ರಾರ್ಥಿಸುವ, ಪೂಜಿಸುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯ ಇದೆ ಎಂದು ತಿಳಿದು ಬಂದಿದೆ. ಜಗದೋದ್ಧಾರಕ್ಕಾಗಿ ಶಿವನು ತನ್ನ ಪತ್ನಿ ಪಾರ್ವತಿಗೆ ಸೂಚಿಸಿದ ವ್ರತ ವರಮಹಾಲಕ್ಷ್ಮಿ ವ್ರತ ಎಂಬ ಕಾರಣಕ್ಕೆ ಈ ಹಬ್ಬಕ್ಕೆ ವಿಶೇಷ ಮಹತ್ವ ಇದೆ ಎಂದು ತಿಳಿದು ಬಂದಿದೆ.
ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಲಕ್ಷ್ಮಿ ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶ್ರೀರಂಗಪಟ್ಟಣದಲ್ಲಿ ಇರುವ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮಿ ಅಲಂಕಾರ ಮಾಡಿ ವಿಭಿನ್ನ ರೀತಿಯಲ್ಲಿ ಹಬ್ಬ ಆಚರಣೆ ಮಾಡಿದ್ದಾರೆ. ತಾಯಿ ಚಾಮುಂಡಿಗೆ ವಿವಿಧ ಮೌಲ್ಯದ ಬಣ್ಣ ಬಣ್ಣದ ನೋಟುಗಳನ್ನು ಹಾಕಿ ಅಲಂಕಾರ ಮಾಡಲಾಗಿದೆ. ಭಕ್ತರಿಂದ ಸಂಗ್ರಹಿಸಿದ ಸುಮಾರು 5 ಲಕ್ಷ ರೂಪಾಯಿಯ ವಿವಿಧ ನೋಟುಗಳಿಂದ ದೇವಿಗೆ ಅಲಂಕಾರ ಮಾಡಿದ್ದಾರೆ.
ವಿವಿಧ ನೋಟುಗಳ ಅಲಂಕಾರದಲ್ಲಿ ದೇವಿ ಕಂಗೊಳಿಸುತ್ತಿದ್ದರೆ. ದೇವಿಯ ಆಶೀರ್ವಾದ ಪಡೆಯರು ಅಪಾರ ಭಕ್ತರು ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇಷ್ಟಾರ್ಥವನ್ನು ಪೂರೈಸುವ ಲಕ್ಷ್ಮಿಯ ಆರಾಧನೆಗಾಗಿ ಈ ವರಮಹಾಲಕ್ಷ್ಮಿ ಹಬ್ಬ ಮಾಡುತ್ತಾರೆ. ಈ ದಿನ ಲಕ್ಷ್ಮಿಯನ್ನು ಶ್ರದ್ಧೆ-ಭಕ್ತಿಯಿಂದ ಆರಾಧಿಸುವುದರಿಂದ ಸಕಲ ಇಷ್ಟಾರ್ಥವೂ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಇದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
