ಸಮಾಚಾರ

“ಕೊಡಗು ಸಂತ್ರಸ್ತರಿಗೆ ಎಷ್ಟು ಪರಿಹಾರ ಕೊಟ್ಟಿರಿ” ಎಂದು ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಕೊಸರಾಡಿದ ಅನಂತಕುಮಾರ್ ಹೆಗಡೆ.

ಕೊಡಗಿನಲ್ಲಿ ಭಯಂಕರ ಮಳೆಯಿಂದಾಗಿ ಭೀಕರ ಪ್ರವಾಹದ ಭೀತಿ ಉಂಟಾಗಿರುವ ವಿಚಾರ ಎಲ್ಲರಿಗೂ ಗೊತ್ತು. ಕೊಡಗು ಸೇರಿದಂತೆ ರಾಜ್ಯದ ವಿವಿದೆಡೆ ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ.. ಊರಿಗೂರೇ ಪ್ರವಾಹ, ಮಳೆ , ಭೂಕುಸಿತದಿಂದ ಕೊಚ್ಚಿಹೋಗಿ ರಾತ್ರಿ ಹಗಲಾಗೋದರೊಳಗೆ ಎಲ್ಲ ಕಳೆದುಕೊಂಡು ಜನ ಬೀದಿಗೆ ಬಂದು ನಿಂತಿದ್ದಾರೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಚಿತ್ರಣಗ ಕೂಡ ಸ್ಪಂದಿಸಿದ್ದು ಅನೇಕ ಕಲಾವಿದರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.. ಆದರೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮಾತ್ರ ಈ ಬಗ್ಗೆ ಗಮನ ಹರಿಸಿದಂತೆ ಕಾಣುತ್ತಿಲ್ಲ.

ಹೌದು, “ಕೊಡಗು ಸಂತ್ರಸ್ತರಿಗೆ ಎಷ್ಟು ಪರಿಹಾರ ಕೊಟ್ಟಿರಿ” ಎಂದು ಪ್ರಶ್ನಿಸಿದ್ದಕ್ಕೆ ಅನಂತಕುಮಾರ್ ಹೆಗ್ಡೆ ಉತ್ತರ ಕೊಡದೇ ಮಾಧ್ಯಮದವರ ಮೇಲೆ ಕೊಸರಾಡಿದ್ದಾರೆ.. ಬೆಂಗಳೂರಿನಲ್ಲಿ ಶನಿವಾರ ನಡೆದ ವಿಷಯ ತಜ್ಞರೊಂದಿಗೆ ಸಮಾಲೋಚನೆ, ವೃತ್ತಿ ಶಿಕ್ಷಣದ ಕುರಿತ ಕಾರ್ಯಾಗಾರದಲ್ಲಿ ಅನಂತಕುಮಾರ್ ಹೆಗಡೆ ಭಾಗವಹಿಸಿದ್ದರು. ಈ ವೇಳೆ ಕೊಡಗು ಪ್ರವಾಹ ನಿರಾಶ್ರಿತರಿಗೆ ಕೇಂದ್ರ ಸರ್ಕಾರದ ಪರಿಹಾರವೇನು ಎಂಬ ಪ್ರಶ್ನೆ ಎದುರಾಗುತ್ತಿದ್ದಂತೆ ಕಾಲು ಕೀಳಲು ಯತ್ನಿಸಿದ್ದಾರೆ..

ಮಾದ್ಯಮದವರು ಮತ್ತೆ ಕೊಡಗು ನಿರಾಶ್ರಿತರ ಪರಿಹಾರದ ಬಗ್ಗೆ ಪ್ರಶ್ನಿಸುತ್ತಿದ್ದಾಗ “ನೀವು ಮೊದಲು ದಾರಿ ಬಿಡಿ, ದಾರಿಗೆ ಅಡ್ಡ ಬರಬಾರದು” ಎಂದು ಅಲ್ಲಿಂದ ಅನಂತಕುಮಾರ್ ಹೊರನಡೆದಿದ್ದಾರೆ.. ಅನಂತಕುಮಾರ್ ಹೆಗಡೆ ಅವರ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ಕೊಡಗು ನಿರಾಶ್ರಿತರ ಬಗ್ಗೆ ಕೇಂದ್ರ ಸಚಿವರು ಯಾಕೆ ಹೀಗೆ ನಿರಾಸಕ್ತಿ ತೋರುತ್ತಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top