ಮನೋರಂಜನೆ

ಮೈತ್ರಿ ಕಷ್ಟವಾದರೆ ಸ್ಪಷ್ಟವಾಗಿ ಹೇಳಿಬಿಡಿ- ದೇವೇಗೌಡ ಖಡಕ್ ಮಾತು.

ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಒಂದೆರಡು ವಾರಗಳಿಂದ ನಡೆಯುತ್ತಿರುವ ಆಂತರಿಕ ಕಲಹ ಮತ್ತು ಭಿನ್ನಾಭಿಪ್ರಾಯಗಳ ವಿರುದ್ಧ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಿಟ್ಟಾಗಿದ್ದಾರೆ ಎಂದು ಹೇಳಲಾಗುತ್ತಿದೆ.. ಮೈತ್ರಿ ಪಕ್ಷ ಕಾಂಗ್ರೆಸ್ ವಿರುದ್ಧ ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.. ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ ಡಿ ದೇವೇಗೌಡ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

 

 

ಈ ಕುರಿತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರೊಂದಿಗೆ ಮಾತನಾಡಿರುವ ದೇವೇಗೌಡ ಅವರು ‘ಯಾವುದೇ ಸಮಸ್ಯೆ ಇಲ್ಲದೆ ಇದ್ದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಅಂತ ಗೌಡರು ಹೇಳಿದ್ದಾರೆ” ಎಂದು ಕನ್ನಡ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಇನ್ನೂ ಈ ಬಗ್ಗೆ ಹೊಳೆನರಸೀಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ದೇವೇಗೌಡ “ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆಸಲಾಗುತ್ತಿದೆ ಎಂಬ ಸಂಗತಿಗಳೆಲ್ಲ ಸುಳ್ಳು. ಸಮ್ಮಿಶ್ರ ಸರಕಾರ ಸುಭದ್ರವಾಗಿದೆ, ಯಾವ ತಂತ್ರಗಳು ನಡೆಯುತ್ತಿಲ್ಲ,” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top