ಸಮಾಚಾರ

ಐಪಿಎಲ್ ನಿರೀಕ್ಷೆಯಲ್ಲಿದ್ದ ಭಾರತೀಯ ಅಭಿಮಾನಿಗಳಿಗೆ ಶಾಕ್?

ಐಪಿಎಲ್ ಎಂದ್ರೆ ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಕ್ರಿಕೆಟ್​ ಜಗತ್ತಿನ ಅತೀ ಶ್ರೀಮಂತ ಕ್ರಿಕೆಟ್​ ಲೀಗ್​ ಆದ ಐಪಿಎಲ್​ಗೆ ಈ ಬಾರಿ ಲೋಕಸಭೆ ಚುನಾವಣೆ ಅಡ್ಡಗಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 2019ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಟೂರ್ನಿ ಭಾಗಶಃ ಇಲ್ಲವೇ ಸಂಪೂರ್ಣವಾಗಿ ಭಾರತದಿಂದ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

 

 

ಸಾರ್ವತ್ರಿಕ ಚುನಾವಣಾ ಕಾರಣಕ್ಕಾಗಿ 2009ರಲ್ಲಿ ದಕ್ಷಿಣ ಆಫ್ರಿಕದಲ್ಲಿ ಟೂರ್ನಿಯನ್ನು ಆಯೋಜಿಸಲಾಗಿತ್ತು. 2014ರಲ್ಲಿ ಯುಎಇಯಲ್ಲಿ ಐಪಿಎಲ್ ಟೂರ್ನಿಯ ಆರಂಭಿಕ ಹಂತದ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಯುಎಇಯಲ್ಲಿ ಟೂರ್ನಿಯ ಎಲ್ಲ ಪಂದ್ಯಗಳನ್ನು ಆಯೋಜಿಸಲು ಕ್ರೀಡಾಂಗಣದ ಕೊರತೆ ಇದೆ. ಯುಎಇನಲ್ಲಿರುವ ದುಬೈ, ಶಾರ್ಜಾ ಮತ್ತು ಅಬುಧಾಬಿಯ ಕ್ರೀಡಾಂಗಣಗಳಲ್ಲಿ ಐಪಿಎಲ್ ಟೂರ್ನಿಯ ಎಲ್ಲ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಿಲ್ಲ. ಆದರೆ ದಕ್ಷಿಣ ಆಫ್ರಿಕದಲ್ಲಿ ಎಲ್ಲ 60 ಪಂದ್ಯಗಳನ್ನು ಆಯೋಜಿಸಲು ಸಾಧ್ಯವಿದೆ. ಈ ಕಾರಣದಿಂದಾಗಿ ಬಿಸಿಸಿಐ ಆಫ್ರಿಕದಲ್ಲಿ 12ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ಆಸಕ್ತಿ ವಹಿಸಿದೆ ಎಂದು ತಿಳಿದು ಬಂದಿದೆ.

ಹಾಗೇನಾದರೂ ಪಂದ್ಯಾವಳಿಯನ್ನ ಸ್ಥಳಾಂತರಗೊಳಿಸಲು ನಿರ್ಧರಿಸಿದರೆ, ದಕ್ಷಿಣ ಆಫ್ರಿಕಾ ಬಿಸಿಸಿಐನ ಮೊದಲ ಆಯ್ಕೆಯಾಗಿರಲಿದೆ ಎನ್ನಲಾಗಿದೆ. ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವುದನ್ನು ಬಿಸಿಸಿಐ ಕಾಯುತ್ತಿದ್ದು, ಚುನಾವಣಾ ದಿನಾಂಕ ಅಧಿಕೃತವಾಗಿ ಪ್ರಕಟಗೊಂಡ ನಂತ್ರ ಸ್ಥಳಾಂತರದ ಬಗ್ಗೆ ನಿರ್ಧರಿಸಲಿದೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top