ಸಮಾಚಾರ

ಮಂಡ್ಯ ರಾಜಕೀಯಕ್ಕೆ ರಮ್ಯಾ ಗುಡ್ ಬೈ-ಬೇರೆ ಕ್ಷೇತ್ರದ ಕಡೆ ಮುಖ ಮಾಡಿದ ಮಾಜಿ ಸಂಸದೆ.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವ ಹೊಂದುವ ಮೂಲಕ ಆನ್‌ಲೈನ್ ವಿಭಾಗವನ್ನು ನಿರ್ವಹಿಸುತ್ತಿರುವಾಕೆ ರಮ್ಯಾ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿಯೇ ಟ್ವೀಟ್ ಮಾಡುತ್ತಲೇ ರಮ್ಯಾ ಪದೇ ಪದೆ ಸದ್ದು ಮಾಡುತ್ತಿದ್ದಾರೆ. ಇಂತಿಪ್ಪ ರಮ್ಯಾ ಮಂಡ್ಯ ರಾಜಕಾರಣದಿಂದ ದೂರ ಸರಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.

 

 

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ರಮ್ಯಾ “ಈ ಬಾರಿಯ ಮಂಡ್ಯ ಉಪಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸದಿದ್ರೆ ನಾನು ಸ್ಪರ್ಧಿಸುವ ಆಸೆ ಹೊಂದಿದ್ದು ಅವಕಾಶ ಸಿಗುತ್ತದೆ ಎಂದು ಭಾವಿಸಿದ್ದೇನೆ. ಆದ್ರೆ ಮೈತ್ರಿ ಆಗಿರೋದ್ರಿಂದ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇರುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ” ಎಂದು ಹೇಳಿದ್ದಾರೆ.

ಮಂಡ್ಯದಿಂದ ಶಿಫ್ಟ್ ಆಗುತ್ತಾರಾ ರಮ್ಯಾ?
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಅವರು ಬೆಂಗಳೂರು ಉತ್ತರ ಅಥವಾ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು ಉತ್ತರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ದೊಡ್ಡ ಪ್ರಮಾಣದಲ್ಲಿದ್ದು ಇದರ ಜೊತೆಗೆ ಅಲ್ಪ ಸಂಖ್ಯಾತ ಸಮುದಾಯದವರು ನಿರ್ಣಾಯಕ ಪ್ರಮಾಣದಲ್ಲಿ ಇದ್ದಾರೆ. ಈ ಹಿನ್ನಲೆಯಲ್ಲಿ ರಮ್ಯಾ ಈ ಎರಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಮಂಡ್ಯದಲ್ಲಿ ರಮ್ಯಾ ಏಕೆ ಸ್ಪರ್ಧೆ ಮಾಡೋದಿಲ್ಲ ಎಂಬುದಕ್ಕೂ ಬಲವಾದ ಕಾರಣವೂ ಇದೆ. ವಿಧಾಸಭಾ ಚುನಾವಣೆಯಲ್ಲಿ ಮಂಡ್ಯದ ಏಳು ಕ್ಷೇತ್ರದಲ್ಲೂ ಜೆಡಿಎಸ್ ಜಯಗಳಿಸಿದೆ. ಲೋಕಸಭೆಯಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದೆಲ್ಲ ಮೀರಿ 2014ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ಮಂಡ್ಯದಿಂದ ದೂರವೇ ಉಳಿದುಕೊಂಡಿದ್ದಾರೆ. 2014ರಲ್ಲಿ ವರ್ಕೌಟ್ ಆಗಿದ್ದ ಮನೆ ಮಗಳು ಎಂಬ ಅನುಕಂಪ ಈ ಬಾರಿ ವರ್ಕೌಟ್ ಆಗುವ ಸಾಧ್ಯತೆ ಕಡಿಮೆ. ಆದ್ದರಿಂದ ಸಹಜವಾಗಿಯೇ ಬೆಂಗಳೂರಿನ ಕಡೆ ರಮ್ಯಾ ಮುಖ ಮಾಡಿದ್ದಾರೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top