ಮನೋರಂಜನೆ

ದುನಿಯಾ ವಿಜಯ್ ಪ್ರಕರಣ,ತಲೆ ಮೇಲೆ ಕೈ ಇಟ್ಟುಕೊಂಡ ಅಂಬಿ ಆಮೇಲೆ ಹೇಳಿದ್ದೇನು ಗೊತ್ತಾ

ದುನಿಯಾ ವಿಜಯ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬಿ ಪ್ರತಿಕ್ರಿಯೆ ಏನು ಗೊತ್ತಾ

ಜಿಮ್ ಟ್ರೈನರ್ ಮಾರುತಿ ಗೌಡ ಎಂಬುವವರ ಮೇಲೆ ಹಲ್ಲೆ ಮತ್ತೆ ಕಿಡ್ನಾಪ್ ಪ್ರಕರಣಕ್ಕೆ ಸಂಭಂದಿಸಿದಂತೆ ಬಂಧಿತರಾಗಿರುವ ದುನಿಯಾ ವಿಜಯ್ ಅವರ ಕುರಿತು ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಷ್ ದುನಿಯಾ ವಿಜಯ್ ಈ ರೀತಿ ಬೀದಿ ಜಗಳ ಮಾಡಿಕೊಳ್ಳಬಾರದಿತ್ತು ಬೇಸರ ವ್ಯಕ್ತಪಡಿಸಿದರು.
ಮೊದಲಿಗೆ ತಲೆ ಮೇಲೆ ಕೈ ಹೊತ್ತು ಏನ್ ಹೇಳಲಿ ಹೇಳಿ. ಜೀವನವನ್ನು ಅರಿತು ಬಾಳಬೇಕು. ಇದಕ್ಕೂ ಮುಂಚೆ ಬುದ್ಧಿ ಹೇಳಿದರೂ ಕೇಳಲಿಲ್ಲ. ಈಗ ನಮ್ಮ ಕೈಯಲ್ಲಿ ಏನೂ ಇಲ್ಲ. ಸಮಯ ಮೀರಿದೆ. ಪಾಸ್ಟ್ ಇಸ್ ಪಾಸ್ಟ್ ಎಂದು ಹೇಳಿದರು.

ಜೈಲಿಗೆ ಹೋದ ಮೇಲೆ ನನ್ನನ್ನು ನೋಡಲು ಯಾರೂ ಬಂದಿಲ್ಲ ಅಂತ ಈಗ ಕಣ್ಣೀರು ಹಾಕುತ್ತಿದ್ದಾನೆ. ಯಾರು ಹೋಗ್ತಾರೆ ಹೇಳಿ. ನಾನು ಅಲ್ಲಿಗೆ ಹೋಗಬಾರದು ಅಂತ ಏನಿಲ್ಲ. ನನಗೂ ಹೋಗೋಕೆ ಆಸೆ. ಆದರೆ ಹಿಂಸೆ ಪಟ್ಟುಕೊಂಡು ಹೇಗೆ ಹೋಗೋದು ಎಂದು ಬೇಸರದ ಮಾತುಗಳನ್ನಾಡಿದರು.’

 

 

ಏನಿದು ಘಟನೆ?
“ವಸಂತನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಮಿ.ಬೆಂಗಳೂರು ದೇಹದಾರ್ಢ್ಯ ಸ್ಪರ್ಧೆ ಏರಪಟ್ಟಿತ್ತು. ಈ ಸ್ಪರ್ಧೆಯನ್ನು ನೋಡಲು ದುನಿಯಾ ವಿಜಿ ತಮ್ಮ ಸಹಚರರೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದ್ದು ಮಾತು ವಿಕೋಪಕ್ಕೆ ತಿರುಗಿ ಹೊಡೆದಾಟ ನಡೆದಿದೆ. ದುನಿಯಾ ವಿಜಯ್ ಮತ್ತು ಅವರ ಸಹಚರರು ಮಾರುತಿಗೌಡನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ಹೇಳಲಾಗಿದೆ.. ಈ ಬಗ್ಗೆ ದುನಿಯಾ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 365, 342, 325, 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈಗ್ರೌಂಡ್ ಪೊಲೀಸರು ದುನಿಯ್ ವಿಜಯ್ ನನ್ನ ಬಂಧಿಸಿದ್ದರು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top