ಮನೋರಂಜನೆ

ದರ್ಶನ್ ಸ್ಥಿತಿ ಈಗ ಹೇಗಿದೆ? ದಾಸನ ಆರೋಗ್ಯ ಕುರಿತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಆಸ್ಪತ್ರೆ.

ಕಾರು ಅಪಘಾತದಲ್ಲಿ ಕೈ ಮೂಳೆ ಮುರಿದುಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ​ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ತಿಳಿದಿರುವ ವಿಷಯವೆ. ಸದ್ಯ ದಚ್ಚು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರನ್ನು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಐಸಿಯುನಲ್ಲಿದ್ದ ದರ್ಶನ್ ಇಂದು ಸ್ಪೆಷಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೈಗೆ ಶಸ್ತ್ರ ಚಿಕಿತ್ಸೆ ಮಾಡಿ ಪ್ಲೇಟ್ ಹಾಕಲಾಗಿದೆ.

 

 

ದರ್ಶನ್ ಆರೋಗ್ಯದ ಬಗ್ಗೆ ಚಿಂತಾಕ್ರಾಂತರಾಗಿ ಕುಳಿತಿರುವ ಅಭಿಮಾನಿಗಳು ಕೊಂಚ ನಿರಾಳರಾಗಿದ್ದಾರೆ ಏಕೆಂದರೆ ಇಂದು ಆಸ್ಪತ್ರೆ ವತಿಯಿಂದ ದಚ್ಚು ಆರೋಗ್ಯ ಸುಧಾರಣೆಗೊಂಡಿರುವ ಕುರಿತಾದ ಪ್ರತಿಕಾ ಹೇಳಿಕೆ ನೀಡಿದ್ದಾರೆ. “ಮೊನ್ನೆಗೆ ಹೋಲಿಸಿದರೆ ದರ್ಶನ್ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು,ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ದರ್ಶನ್ ನಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು ಅವರ ಕೈನಲ್ಲಿದ್ದ ಊತ ಹಾಗೂ ಗಾಯದ ನೋವು ಕಡಿಮೆಯಾಗಿದೆ.” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದರ್ಶನ್ ಅವರು ಆಸ್ಪತ್ರೆಯಲ್ಲಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದ್ದು ಅವರ ಬಲಗೈ ಸಂಪೂರ್ಣವಾಗಿ ಬ್ಯಾಂಡೇಜ್ ಸುತ್ತಿರುವುದು ಕಾಣಿಸುತ್ತಿದೆ. ದರ್ಶನ್ ಅವರ ಬಲಗೈಗೆ ಹೆಚ್ಚು ಪೆಟ್ಟಾಗಿರುವುದು ಈ ಫೋಟೋ ಮೂಲಕ ತಿಳಿಯುತ್ತದೆ‌. ನೆನ್ನೆ ಮದ್ಯಾಹ್ನವೇ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಿದ್ದು ದರ್ಶನ್ ಅವರನ್ನ ಯಾವಾಗ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಅಧಿಕೃತವಾಗಿ ತಿಳಿದುಬಂದಿಲ್ಲ.. ಮೂಲಗಳ ಪ್ರಕಾರ ದರ್ಶನ್ ಅವರು ಇನ್ನೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top