ಮನೋರಂಜನೆ

ದುನಿಯಾ ವಿಜಿ ಜಾಮೀನು ಅರ್ಜಿ ವಜಾ- ಕಂಬಿ ಹಿಂದೆಯೇ ಉಳಿಯಬೇಕು ಕರಿಚಿರತೆ.

ಜಿಮ್ ಟ್ರೈನರ್ ಮಾರುತಿ ಗೌಡ ಎಂಬುವವರ ಮೇಲೆ ಹಲ್ಲೆ ಮತ್ತೆ ಕಿಡ್ನಾಪ್ ಪ್ರಕರಣಕ್ಕೆ ಸಂಭಂದಿಸಿದಂತೆ ಬಂಧಿತರಾಗಿರುವ ದುನಿಯಾ ವಿಜಯ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ವಾದ, ಪ್ರತಿವಾದ ಪರಿಶೀಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.

 

 

ಸೋಮವಾರ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದ 8ನೇ ಎಸಿಎಂಎಂ ಕೊರ್ಟ್ ಇಂದು ತೀರ್ಪು ಪ್ರಕಟಿಸಿದೆ. ಹೀಗಾಗಿ, ಈ ಹಿಂದೆ ಕೋರ್ಟ್ ನೀಡಿದ್ದ ಆದೇಶದಂತೆ ದುನಿಯಾ ವಿಜಯ್ 14 ದಿನಗಳವರೆಗೂ ನ್ಯಾಯಾಂಗ ಬಂಧನದಲ್ಲೇ ಇರಬೇಕಾಗಿದೆ.. ದುನಿಯಾ ವಿಜಿ ಪರ ವಕೀಲ ನಾಳೆ ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಪರಪ್ಪನ ಅಗ್ರಹಾರ ಸೇರಿರುವ ನಟ ವಿಜಯ್​ ಜೈಲಿನಲ್ಲಿ 3ನೇ ದಿನವನ್ನು ಕಳೆದಿದ್ದಾರೆ.

ಏನಿದು ಘಟನೆ?
“ವಸಂತನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಮಿ.ಬೆಂಗಳೂರು ದೇಹದಾರ್ಢ್ಯ ಸ್ಪರ್ಧೆ ಏರಪಟ್ಟಿತ್ತು. ಈ ಸ್ಪರ್ಧೆಯನ್ನು ನೋಡಲು ದುನಿಯಾ ವಿಜಿ ತಮ್ಮ ಸಹಚರರೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದ್ದು ಮಾತು ವಿಕೋಪಕ್ಕೆ ತಿರುಗಿ ಹೊಡೆದಾಟ ನಡೆದಿದೆ. ದುನಿಯಾ ವಿಜಯ್ ಮತ್ತು ಅವರ ಸಹಚರರು ಮಾರುತಿಗೌಡನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ಹೇಳಲಾಗಿದೆ.. ಈ ಬಗ್ಗೆ ದುನಿಯಾ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 365, 342, 325, 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈಗ್ರೌಂಡ್ ಪೊಲೀಸರು ದುನಿಯ್ ವಿಜಯ್ ನನ್ನ ಬಂಧಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top